crime

ಹೈಕೋರ್ಟ್ ವಕೀಲೆ ಚೈತ್ರಾ ಗೌಡ ಅನುಮಾನಾಸ್ಪದ ಸಾವು : ಸಂಪೂರ್ಣ ವಿವರ

ಬೆಂಗಳೂರು : ಹೈಕೋರ್ಟ್ ವಕೀಲರಾದ ಚೈತ್ರಾ ಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ ಎಂದು ಪೊಲೀಸ್ ಅಧಿಕಾರಿಗಳ ಮೂಲಗಳು ತಿಳಿಸಿವೆ.

ಚೈತ್ರಾ ಗೌಡ ಮೇ 11ರಂದು ಸಂಜಯನಗರದ ಅಣ್ಣಯ್ಯಪ್ಪ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.

ಆದರೆ ಚೈತ್ರಾ ಕುಟುಂಬಸ್ಥರು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು ,ದೂರಿನ ಅನ್ವಯ ಕೆಎಎಸ್ ಅಧಿಕಾರಿ ಶಿವಕುಮಾರ್‌ನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಪತಿ ಶಿವಕುಮಾರ್ ವಿಚಾರಣೆ ವೇಳೆ , ಪತ್ನಿಯೊಂದಿಗೆ ಯಾವುದೇ ವೈಷಮ್ಯ ಇರಲಿಲ್ಲ. ಹಣಕಾಸಿನ ತೊಂದರೆಯೂ ಇರಲಿಲ್ಲ .ಆದರೆ ಚೈತ್ರಾ ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಿದ್ದಾರೆ.

ಚೈತ್ರಾ , ಕುಟುಂಬಸ್ಥರೊಂದಿಗೆ ಮಾತನಾಡುವಾಗ ಮೂರು ತಿಂಗಳ ಹಿಂದೆಯೇ ಸಾಯೋ ಮಾತುಗಳನ್ನಾಡಿದ್ದರು, ಆಗ ಕುಟುಂಬಸ್ಥರೇ ಧೈರ್ಯತುಂಬಿದ್ದಾರೆ.

ಸಂಜಯ್ ನಗರದ ಪೊಲೀಸರಿಗೆ, ಮನೆಯಲ್ಲಿ ಸಿಕ್ಕ ಡೆತ್ ನೋಟ್‌ ಚೈತ್ರಾ ಅವರೇ ಬರೆದಿದ್ದಾರೆ ಎಂದು ದೃಡವಾಗಿದೆ.16ನೇ ವಯಸ್ಸಿನ ಭಾರತೀಯ ಬಾಲಕಿ ಮೌಂಟ್‌ ಎವರೆಸ್ಟ್‌ ಶಿಖರ ಏರಿ ಸಾಧನೆ

ಮರಣೋತ್ತರ ಪರೀಕ್ಷೆಯಲ್ಲೂ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದ್ದು , ಸಂಜಯ್‌ನಗರ ಪೊಲೀಸರು ತನಿಖೆ ನಡೆಸಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ.

Team Newsnap
Leave a Comment

Recent Posts

ಡಿ.20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸಿಎಂ

ಬೆಂಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಡಿಸೆಂಬರ್‌ 20 ರಿಂದ ಮೂರು… Read More

June 25, 2024

ವಿಷಯುಕ್ತ ಮದ್ಯ ಸೇವಿಸಿ 58 ಮಂದಿ ದುರ್ಮರಣ

ಚೆನ್ನೈ : ವಿಷಯುಕ್ತ ಮದ್ಯ ಕುಡಿದು ತಮಿಳು ನಾಡಿನಲ್ಲಿ 58 ಮಂದಿ ಮೃತಪಟ್ಟಿದ್ದಾರೆ. ಆರೋಗ್ಯ ಸಚಿವ ಮಾ ಸುಬ್ರಹ್ಮಣಿಯನ್, ದುರಂತದಲ್ಲಿ… Read More

June 25, 2024

ರಾಜ್ಯ ಸರ್ಕಾರದಿಂದ ಪ್ರತಿ ಲೀಟರ್ ‘ಹಾಲಿಗೆ’ 2.10 ರೂ ಹೆಚ್ಚಳ

ಬೆಂಗಳೂರು: ಪೆಟ್ರೋಲ್‌, ಡಿಸೇಲ್‌ ಮೇಲಿನ ಸೆಸ್‌ ದರವನ್ನು ಹೆಚ್ಚಿದ ರಾಜ್ಯ ಸರ್ಕಾರ ಇದೀಗ ಹಾಲಿನ ದರವನ್ನು ಹೆಚ್ಚಿಸಿ ಆದೇಶವನ್ನು ಹೊರಡಿಸಿದೆ.… Read More

June 25, 2024

ನಿವೃತ್ತ ಸಿಜಿಎಂ ಎ.ಕೆ.ಸಿಂಗ್ ‘ಬಂಧನ್ ಬ್ಯಾಂಕ್’ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ನೇಮಕ

ಇಂದು ರಿಸರ್ವ್ ಬ್ಯಾಂಕ್ , ಎ.ಕೆ.ಸಿಂಗ್ ಅವರನ್ನು ಬಂಧನ್ ಬ್ಯಾಂಕಿನ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ನೇಮಿಸಿದೆ. ಆರ್‌ಬಿಐನ ಮುಖ್ಯ ಜನರಲ್… Read More

June 25, 2024

ಪುನೀತ್ ಮತ್ತೆ ಹುಟ್ಟಿ ಬಂದರೆ ಮಗಳ ಹೊಟ್ಟೆಯಲ್ಲಿ : ಆತ್ಮ ಸಂಭಾಷಣೆ ಯಲ್ಲಿ ಪುನೀತ್ ಹೇಳಿಕೆ

ಬೆಂಗಳೂರು: ಕಳೆದ ಮೂರು ವರ್ಷಗಳ ಹಿಂದೆ ಹಠಾತ್ ನಿಧನರಾದ ಪುನೀತ್ ರಾಜ್ ಕುಮಾರ್ ಪುನರ್ ಜನ್ಮದಲ್ಲಿ ಮಗಳ ಹೊಟ್ಟೆಯಲ್ಲಿ ಹುಟ್ಟಿ… Read More

June 24, 2024

ಸರ್ಕಾರಿ ನೌಕರರಿಗೆ 27% ವೇತನ ಹೆಚ್ಚಳ : ಸಿಎಂ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಈ ಬಾರಿಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರಿಗೆ ಶೇಕಡಾ 27 %ರಷ್ಟು ವೇತನ… Read More

June 20, 2024