January 29, 2026

Newsnap Kannada

The World at your finger tips!

highcourt,congress,lokayukta

shock for Congress: High Court order to cancel ACB - Lokyukta gets power again

ಭ್ರಷ್ಟಾಚಾರ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಗೆ ಹೈಕೋರ್ಟ್ ನೋಟಿಸ್

Spread the love

ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ರಾಜ್ಯ ಹೈಕೋರ್ಟ್, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಸೇರಿದಂತೆ ನಾಲ್ವರಿಗೆ ನೋಟಿಸ್ ಜಾರಿ ಮಾಡಿದೆ.

ಒಂದೆಡೆ ರಾಜ್ಯದಲ್ಲಿ ಸಚಿವ ಸಂಪುಟ ರಚನೆ, ಆ ಸಂಪುಟದಲ್ಲಿ ತಮ್ಮ ಪುತ್ರ ವಿಜಯೇಂದ್ರಗೆ ಸ್ಥಾನ ಕೊಡಿಸೋದಕ್ಕೆ ಯಡಿಯೂರಪ್ಪ ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಆದರೆ ಇಂದು ಹೈಕೋರ್ಟ್ ನೋಟಿಸ್ ಜಾರಿ ಮಾಡಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಸಾಮಾಜಿಕ ಹೋರಾಟಗಾರ ಟಿಜೆ ಆಬ್ರಹಾಂ ಕರ್ನಾಟಕ ಹೈಕೋರ್ಟ್ ನಲ್ಲಿ ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ ಕುರಿತಂತ ಅರ್ಜಿಯ ವಿಚಾರಣೆ ನಡೆಸಿತು.

ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಬಿಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ, ಎಸ್ ಟಿ ಸೋಮಶೇಖರ್ ಹಾಗೂ ಐಎಎಸ್ ಅಧಿಕಾರಿ ಪ್ರಕಾಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ ಈ ಪ್ರಕರಣದ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.

error: Content is protected !!