Main News

ಮೈಸೂರು ವಕೀಲರ ಸಂಘಕ್ಕೆ ಹೈಕೋರ್ಟ್ ನೋಟಿಸ್

ದೇಶ ವಿರೋಧಿ ಭಿತ್ತಿಪತ್ರ ಪ್ರದರ್ಶನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೂ ವಕಾಲತ್ತು ಹಾಕದಂತೆ ವಕೀಲರಿಗೆ ಮೈಸೂರು ವಕೀಲರ ಸಂಘ ವಿಧಿಸಿದ್ದ ನಿಷೇಧ ಕುರಿತಂತೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಆರೋಪಿ ಪರ ಯಾವುದೇ ವಕೀಲ ವಕಲಾತ್ತು ವಹಿಸಬಾರದು ಎಂದು ನಿರ್ಣಯ ತೆಗೆದುಕೊಳ್ಳುವುದು ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ವಿರುದ್ಧವಾಗಿದೆ. ಆದ್ದರಿಂದ ಆರೋಪಿ ವಿದ್ಯಾರ್ಥಿನಿ ಪರ ವಕಾಲತ್ತು ವಹಿಸಬಾರದು ಎಂದು ನಿರ್ಣಯ ತೆಗೆದುಕೊಂಡಿದ್ದರೆ, ಅದರ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಮೈಸೂರು ಜಿಲ್ಲಾ ವಕೀಲರ ಸಂಘಕ್ಕೆ ನಿರ್ದೇಶಿಸಲಾಗಿದೆ.

ಸಿಎಎ ಹಾಗೂ ಎನ್‌ಆರ್‌ಸಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮೀರ್ ಎಂದು ಭಿತ್ತಿಪತ್ರ ಪ್ರದರ್ಶಿಸಿದ ಆರೋಪದಡಿ ಬಂಧನಕ್ಕೆ ಒಳಗಾದ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್ ಪರ ವಕಾಲತ್ತು ವಹಿಸದಂತೆ ಕೈಗೊಂಡ ನಿರ್ಣಯ ವಿಚಾರವಾಗಿ ಮೈಸೂರು ವಕೀಲರ ಸಂಘಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸಂಘದ ನಿರ್ಣಯ ಪ್ರಶ್ನಿಸಿ ವಕೀಲ ಎಲ್.ರಮೇಶ್ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ಪೀಠ, ಅರ್ಜಿಯಲ್ಲಿ ಪ್ರತಿವಾದಿಗಳಾದ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಹಾಗೂ ಮೈಸೂರು ಜಿಲ್ಲಾ ವಕೀಲರ ಸಂಘಕ್ಕೆ ನೋಟಿಸ್ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು.

ಅರ್ಜಿದಾರ ವಕೀಲ ವಾದಿಸಿ, ಮೈಸೂರು ವಿವಿ ಆವರಣದಲ್ಲಿ 2020ರ ಜ. 8ರಂದು ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ್’ ಭಿತ್ತಿಪತ್ರ ಪ್ರದರ್ಶಿಸಿದ ಸಂಬಂಧ ನಳಿನಿ ಬಾಲಕುಮಾರ್ ಎಂಬ ವಿದ್ಯಾರ್ಥಿನಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ನಳಿನಿ ವಿರುದ್ಧ ಯಾರೊಬ್ಬರೂ ವಕಾಲತ್ತು ವಹಿಸಬಾರದು ಎಂದು ಜ. 16ರಂದು ಮೈಸೂರು ಜಿಲ್ಲಾ ವಕೀಲರ ಸಂಘ ನಿರ್ಣಯ ಕೈಗೊಂಡಿದೆ. ವಕಾಲತ್ತು ವಹಿಸಲು ಮುಂದಾದ ಕೆಲ ವಕೀಲರನ್ನು ಸಂಘದಿಂದ ಅಮಾನತುಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ವಕೀಲರ ಸಂಘದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ವಕೀಲರ ಪರಿಷತ್‌ಗೆ ನಿರ್ದೇಶನ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

Team Newsnap
Leave a Comment
Share
Published by
Team Newsnap

Recent Posts

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More

May 12, 2024

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024