ಕನ್ನಡ ಪರ ಸಂಘಟನೆಗಳು ನಾಳೆ ಬಂದ್‌ಗೆ ಕರೆಕೊಟ್ಟ ವಿಚಾರಕ್ಕೆ ಸಂಬಂಧಿಸಿ ದಂತೆ ಬಂದ್ನಿಂದ ಆಗುವ ಆರ್ಥಿಕ ನಷ್ಟಕ್ಕೆ ಬಂದ್ ಸಂಘಟನೆಯ ಚಳುವಳಿಗಾರರೇ ಹೊಣೆ ಆಗಬೇಕಿದೆ
ಸಂಘಟಕರೇ ಹೊಣೆ.. ಬೀದಿ ಬದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಹೊಣೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಬಂದ್, ರ್ಯಾಲಿ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಡಿಸೆಂಬರ್ 17 ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಪಕ್ಷಗಳಿಗೆ ತಾಕೀತು ಮಾಡಿದೆ.
ಪೋಲೀಸರಿಗೆ ನಿಗಾ ಇಡಲು ಸೂಚನೆ:
- ಪ್ರತಿಭಟನೆಯ ವೇಳೆ ಮಾಸ್ಕ್, ಸಾಮಾಜಿಕ ಅಂತರದ ಬಗ್ಗೆ ಪೊಲೀಸರು ನಿಗಾ ಇಡಬೇಕು.
*ನಿಯಮಗಳನ್ನು ಉಲ್ಲಂಘಿಸಿದವರಿಂದ ಪೊಲೀಸರು ದಂಡ ಸಂಗ್ರಹಿಸಬೇಕು.
- ಸರ್ಕಾರ ಕೂಡಾ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಜೆ ಎ.ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.
ಬಂದ್ ಕೈ ಬಿಡಿ – ಸಿ ಎಂ ಮನವಿ:
ಮುಖ್ಯಮಂತ್ರಿ ಯಡಿಯೂರಪ್ಪನವರು ಕನ್ನಡ ಪರ ಸಂಘಟನೆಗಳಲ್ಲಿ ಮನವಿ ಮಾಡಿ ಬಂದ್ ಕೈ ಬಿಡುವಂತೆ ಕೋರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾನು ಎಲ್ಲಾ ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.
ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಮಾಡಬೇಡಿ. ಅದರ ಅಗತ್ಯತೆಯೂ ಇಲ್ಲ. ಕನ್ನಡಕ್ಕೆ ಏನೇನೋ ಆದ್ಯತೆ ಕೊಡಬೇಕೋ, ಇನ್ನೂ ಹೆಚ್ಚಿನದಾಗಿ ಏನೇನು ಕೊಡಬೇಕೋ ಅದನ್ನು ಕೊಡಲು ನಾನು ಸಿದ್ದನಿದ್ದೇನೆ ಎಂದಿದ್ದಾರೆ.
ಕನ್ನಡ ಪರ ಮುಖಂಡರು ಏನು ಹೇಳುತ್ತಾರೊ ಅದನ್ನು ನಾನು ಮಾಡಲು ಸಿದ್ಧನಿದ್ದೇನೆ. ಬಂದ್‌ಗೆ ಎಲ್ಲಿಯೂ ಕೂಡ ಅವಕಾಶ ಇಲ್ಲ. ಯಾರು ಕೂಡ ಬಂದ್ ಮಾಡಬೇಡಿ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದ್ದಾರೆ.
- ಮಳೆ ನಿಂತರೂ ಮರದ ಹನಿ ನಿಲ್ಲದು
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
More Stories
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ