Main News

ಬಂದ್ ಗೆ ಕರೆ ಕೊಟ್ಟವರಿಗೆ ಹೈಕೋರ್ಟ್ ಭರ್ಜರಿ ಶಾಕ್ – ಕಠಿಣ ಕ್ರಮ ಕಾದಿದೆ

ಕನ್ನಡ ಪರ ಸಂಘಟನೆಗಳು ನಾಳೆ ಬಂದ್​ಗೆ ಕರೆಕೊಟ್ಟ ವಿಚಾರಕ್ಕೆ ಸಂಬಂಧಿಸಿ ದಂತೆ ಬಂದ್​​ನಿಂದ ಆಗುವ ಆರ್ಥಿಕ ನಷ್ಟಕ್ಕೆ ಬಂದ್ ಸಂಘಟನೆಯ ಚಳುವಳಿಗಾರರೇ ಹೊಣೆ ಆಗಬೇಕಿದೆ

ಸಂಘಟಕರೇ ಹೊಣೆ.. ಬೀದಿ ಬದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಹೊಣೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.

ಬಂದ್, ರ್ಯಾಲಿ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಡಿಸೆಂಬರ್ 17 ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಪಕ್ಷಗಳಿಗೆ ತಾಕೀತು ಮಾಡಿದೆ.

ಪೋಲೀಸರಿಗೆ ನಿಗಾ ಇಡಲು ಸೂಚನೆ:

  • ಪ್ರತಿಭಟನೆಯ ವೇಳೆ ಮಾಸ್ಕ್, ಸಾಮಾಜಿಕ ಅಂತರದ ಬಗ್ಗೆ ಪೊಲೀಸರು ನಿಗಾ‌ ಇಡಬೇಕು.

*ನಿಯಮಗಳನ್ನು ಉಲ್ಲಂಘಿಸಿದವರಿಂದ ಪೊಲೀಸರು ದಂಡ ಸಂಗ್ರಹಿಸಬೇಕು.

  • ಸರ್ಕಾರ ಕೂಡಾ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಜೆ ಎ.ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.

ಬಂದ್ ಕೈ ಬಿಡಿ – ಸಿ ಎಂ ಮನವಿ:

ಮುಖ್ಯಮಂತ್ರಿ ಯಡಿಯೂರಪ್ಪನವರು ಕನ್ನಡ ಪರ ಸಂಘಟನೆಗಳಲ್ಲಿ ಮನವಿ ಮಾಡಿ ಬಂದ್ ಕೈ ಬಿಡುವಂತೆ ಕೋರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾನು ಎಲ್ಲಾ ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.

ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಮಾಡಬೇಡಿ. ಅದರ ಅಗತ್ಯತೆಯೂ ಇಲ್ಲ. ಕನ್ನಡಕ್ಕೆ ಏನೇನೋ ಆದ್ಯತೆ ಕೊಡಬೇಕೋ, ಇನ್ನೂ ಹೆಚ್ಚಿನದಾಗಿ ಏನೇನು ಕೊಡಬೇಕೋ ಅದನ್ನು ಕೊಡಲು ನಾನು ಸಿದ್ದನಿದ್ದೇನೆ ಎಂದಿದ್ದಾರೆ.

ಕನ್ನಡ ಪರ ಮುಖಂಡರು ಏನು ಹೇಳುತ್ತಾರೊ ಅದನ್ನು ನಾನು ಮಾಡಲು ಸಿದ್ಧನಿದ್ದೇನೆ. ಬಂದ್‌ಗೆ ಎಲ್ಲಿಯೂ ಕೂಡ ಅವಕಾಶ ಇಲ್ಲ. ಯಾರು ಕೂಡ ಬಂದ್ ಮಾಡಬೇಡಿ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024