ಹಿಜಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಎದುರಾಗಿರುವ ಹಿನ್ನೆಲೆಯಲ್ಲಿ ಆ ಮೂವರಿಗೂ ʼವೈʼ ಶ್ರೇಣಿಯ ಭದ್ರತೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಿಜಾಬ್ ತೀರ್ಪು ನೀಡಿದ ಮೂವರೂ ನ್ಯಾಯಮೂರ್ತಿಗಳಿಗೆ ʻವೈʼ ಶ್ರೇಣಿ ಭದ್ರತೆ ನೀಡಲು ನಿರ್ಧರಿಸಿದ್ದೇವೆ.
ನ್ಯಾಯಮೂರ್ತಿಗಳಿಗೆ ಕೆಲವರು ಜೀವ ಬೆದರಿಕೆ ಹಾಕಿರುವ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಪೊಲೀಸ್ ಮಹಾನಿರ್ದೇಶಕರು ಹಾಗೂ ಐಜಿ ಅವರಿಗೆ ಸೂಚಿಸಿದ್ದೇನೆ ಎಂದರು.
ಮೂವರು ನ್ಯಾಯಮೂರ್ತಿಗಳಲ್ಲಿ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಕೂಡ ಸೇರಿದ್ದಾರೆ. ಹಿಜಬ್ ಬಗ್ಗೆ ತೀರ್ಪು ನೀಡಿದ ತ್ರಿಸದಸ್ಯ ಪೀಠದಲ್ಲಿ ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಮತ್ತು ಖಾಝಿ ಎಂ ಜೈಬುನ್ನಿಸಾ ಅವರೂ ಇದ್ದರು.
ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿರುವ ಮೂವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಒತ್ತಾಯಿಸಿದರು.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ