ಹಿಜಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಎದುರಾಗಿರುವ ಹಿನ್ನೆಲೆಯಲ್ಲಿ ಆ ಮೂವರಿಗೂ ʼವೈʼ ಶ್ರೇಣಿಯ ಭದ್ರತೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಿಜಾಬ್ ತೀರ್ಪು ನೀಡಿದ ಮೂವರೂ ನ್ಯಾಯಮೂರ್ತಿಗಳಿಗೆ ʻವೈʼ ಶ್ರೇಣಿ ಭದ್ರತೆ ನೀಡಲು ನಿರ್ಧರಿಸಿದ್ದೇವೆ.
ನ್ಯಾಯಮೂರ್ತಿಗಳಿಗೆ ಕೆಲವರು ಜೀವ ಬೆದರಿಕೆ ಹಾಕಿರುವ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಪೊಲೀಸ್ ಮಹಾನಿರ್ದೇಶಕರು ಹಾಗೂ ಐಜಿ ಅವರಿಗೆ ಸೂಚಿಸಿದ್ದೇನೆ ಎಂದರು.
ಮೂವರು ನ್ಯಾಯಮೂರ್ತಿಗಳಲ್ಲಿ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಕೂಡ ಸೇರಿದ್ದಾರೆ. ಹಿಜಬ್ ಬಗ್ಗೆ ತೀರ್ಪು ನೀಡಿದ ತ್ರಿಸದಸ್ಯ ಪೀಠದಲ್ಲಿ ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಮತ್ತು ಖಾಝಿ ಎಂ ಜೈಬುನ್ನಿಸಾ ಅವರೂ ಇದ್ದರು.
ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿರುವ ಮೂವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಒತ್ತಾಯಿಸಿದರು.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ