November 23, 2024

Newsnap Kannada

The World at your finger tips!

WhatsApp Image 2023 03 12 at 3.26.00 PM

ಪ್ರಧಾನಿ ಮೋದಿ ಮಂಡ್ಯದಲ್ಲಿ ಮಾಡಿದ ಭಾಷಣದ ಪ್ರಮುಖ ಅಂಶಗಳು

Spread the love

ಮಂಡ್ಯದ ಗೆಜ್ಜಲಗೆರೆಯಲ್ಲಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿ ತಾಯಿ ಭುವನೇಶ್ವರಿಗೆ ನಮಸ್ಕಾರಗಳು ಎಂದು ಮಾತು ಆರಂಭಿಸಿದರು.

ಮಂಡ್ಯ ಜಿಲ್ಲೆಯ ಜನರ ಪ್ರೀತಿಯ ಋಣವನ್ನು ಬಡ್ಡಿ ಸಮೇತ ನಮ್ಮ ಸರ್ಕಾರ ತೀರಿಸಲಿದೆ. ಕೆಲವು ದಿನಗಳಿಂದ ಎಕ್ಸ್‌ ಪ್ರೆಸ್‌ ಹೈವೇ ಬಗ್ಗೆ ಸಾಕಷ್ಟ ಚರ್ಚೆ ನಡೆಯುತ್ತಿತ್ತು. ಸಾಮಾಜಿಕ ಜಾಲತಾಣದಲ್ಲಿ ದಶಪಥ ಹೆದ್ದಾರಿ ಬಗ್ಗೆ ಚರ್ಚೆ ನಡೆಯುತ್ತಿದ್ದವು. ಮೈಸೂರು- ಬೆಂಗಳೂರು ಎಕ್ಸ್‌ ಪ್ರೆಸ್‌ ಹೈವೇ ಫೋಟೋಗಳು ವೈರಲ್‌ ಆಗಿದೆ. ಮೈಸೂರು-ಕುಶಾಲನಗರ 4 ಪಥದ ರಸ್ತೆಗೆ ಶಿಲಾನ್ಯಾಸ ನೆರೆವೇರಿಸಿದ್ದೇವೆ ಎಂದರು. ಮಂಡ್ಯದಲ್ಲಿ ಮೋದಿ ರೋಡ್ ಶೋ –ಅಭಿಮಾನಿಗಳಿಗೆ ಪ್ರಧಾನಿ ಪುಷ್ಪಾರ್ಚನೆ

ದಶಪಥ ಹೆದ್ದಾರಿಯಿಂದ ಈ ಭಾಗದಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಈ ಪುಣ್ಯ ಭೂಮಿ ಒಡೆಯರ್‌ , ವಿಶ್ವೇಶ್ವರಯ್ಯರನ್ನು ದೇಶಕ್ಕೆ ನೀಡಿದೆ. ಭಾರತ ಇಂದು ಸಾಕಷ್ಟು ಬದಲಾವಣೆ ಆಗುತ್ತಿದೆ. ಭಾರತ ಮಾಲಾ, ಸಾಗರ ಮಾಲಾ ಯೋಜನೆಯಿಂದ ದೇಶ ಅಭಿವೃದ್ಧಿಯತ್ತ ಸಾಗಿದೆ. ಮೂಲಸೌಕರ್ಯ ಕ್ಷೇತ್ರದಲ್ಲಿ ಡಬಲ್‌ ಇಂಜಿನ್‌ ಸರ್ಕಾರದಿಂದ ಬದಲಾವಣೆಯಾಗಿದೆ ಎಂದರು. 5 ಮತ್ತು 8 ನೇ ತರಗತಿಯ ‘ಪಬ್ಲಿಕ್ ಪರೀಕ್ಷೆ’ ಮುಂದೂಡಿಕೆ

ದಶಪಥ ಹೆದ್ದಾರಿಯಿಂದ ಪ್ರವಾಸೋದ್ಯಮ ಕ್ಷೇತ್ರ ಮತ್ತಷ್ಟು ಬೆಳೆಯಲಿದೆ. 2014ಕ್ಕಿಂತ ಮೊದಲು ದೇಶದ ಬಡವರ ಬಗ್ಗೆ ಕಾಳಜಿ ತೋರಿಸಲಿಲ್ಲ. ಬಡವರ ಹೆಸರಿನ ಯೋಜನೆಯಲ್ಲಿ ಕೋಟ್ಯಂತರ ಹಣ ಲೂಟಿ ಮಾಡಿದರು ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿ, 2014ರಲ್ಲಿ ದೇಶದ ಜನರು ನನಗೆ ಆಶೀರ್ವಾದ ನೀಡಿದರು. ಬಡವರ ಕಷ್ಟಗಳನ್ನು ಅರಿತುಕೊಂಡು ನಿವಾರಿಸಲು ಪ್ರಯತ್ನಿಸುತ್ತಿದ್ದೇವೆ. ಕಳೆದ 9 ವರ್ಷಗಳಲ್ಲಿ ಕೇಂದ್ರ ಯೋಜನೆಯಿಂದ ಬಡವರ ಬದುಕು ಹಸನಾಗಿದೆ ಎಂದರು. ರಾಜ್ಯದ ಗ್ರಾ.ಪಂಗಳಲ್ಲಿ 12 ಸಾವಿರ `ವಿವೇಕಾನಂದ’ ಸ್ವಸಹಾಯ ಗುಂಪು’ ರಚನೆ : 5 ಲಕ್ಷ ಸಾಲ, 1 ಲಕ್ಷ ಸಬ್ಸಿಡಿ

ಕರ್ನಾಟಕದಲ್ಲೂ ಬಡವರಿಗೆ ಮನೆ ನಿರ್ಮಾಣ, ಕುಡಿಯುವ ನೀರಿನ ಸಂಪರ್ಕ ನೀಡಲಾಗಿದೆ. ಜಲ್​ಜೀವನ್ ಮಿಷನ್​ನಡಿ 40 ಲಕ್ಷ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ನೀಡಲಾಗಿದೆ. ಬಜೆಟ್​ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಹಣ ಘೋಷಣೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ರೈತರ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗಿದೆ. 3 ಲಕ್ಷಕ್ಕೂ ಹೆಚ್ಚು ರೈತರಿಗೆ 600 ಕೋಟಿಗೂ ಹೆಚ್ಚು ಹಣ ವರ್ಗಾವಣೆ ಮಾಡಲಾಗಿದೆ ಎಂದು ಮೋದಿ ಹೇಳಿದರು.

Copyright © All rights reserved Newsnap | Newsever by AF themes.
error: Content is protected !!