ಮಂಡ್ಯ- ಮೈಸೂರಿನಲ್ಲಿ ರೈತರಿಂದ ಹೆದ್ದಾರಿ ತಡೆ : ಸಂಚಾರ ಅಸ್ತವ್ಯಸ್ತ

Team Newsnap
1 Min Read

ಕೃಷಿ ಕಾಯ್ದೆಯನ್ನು ಅಧಿಕೃತವಾಗಿ ಹಿಂದಕ್ಕೆ ಪಡೆಯುವುದರ ಜೊತೆಗೆ ಬೆಂಬಲ ಬೆಲೆ ಖಾತ್ರಿಪಡಿಸುವಂತೆ ಆಗ್ರಹಿಸಿ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ರಾಜ್ಯದಲ್ಲೂ ರೈತರು ವಿವಿಧ ಬೇಡಿಕೆಗಳಿಗಾಗಿ ರಾಜ್ಯ ಹೆದ್ದಾರಿ ಬಂದ್​​​ಗೆ ನಡೆಸಿದರು.
ಇದರಿಂದ ರಾಜ್ಯ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತ ವಾಗಿತ್ತು.

ಮಂಡ್ಯ , ಶ್ರೀರಂಗಪಟ್ಟಣ, ಮೈಸೂರು , ರಾಮನಗರ , ಬೆಳಗಾವಿ ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ರೈತರು, ರೈತ ನಾಯಕರು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ಮಾಡಿದರು.

ರಾಮನಗರದಲ್ಲಿ ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಚಳುವಳಿಗೆ ವರ್ಷ ತುಂಬಿದ ಹಿನ್ನೆಲೆ ರಾಮನಗರದ ಎಪಿಎಂಸಿ ವೃತ್ತದ ಬಳಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮುನಿರಾಜು ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ರೈತರು ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲೂ ರಸ್ತೆ ತಡೆ:

ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗೋಹತ್ಯೆ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಜಿಲ್ಲೆಯ ಮೂರು ಟೋಲ್ ಗೇಟ್‌ಗಳಲ್ಲಿ ಹೆದ್ದಾರಿ ತಡೆದು ರೈತ ಸಂಘಟನೆಗಳು ಪ್ರತಿಭಟನೆಗೆ ನಿಂತಿವೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಭಾರತೀಯ ಕೃಷಿಕ ಸಮಾಜ ಸೇರಿ ವಿವಿಧ ರೈತಪರ ಸಂಘಟನೆಗಳ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಮೈಸೂರು ಹೆದ್ದಾರಿ ತಡೆ:

ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಾಸ್‌‌ಗೆ ಆಗ್ರಹಿಸಿ ಸಾಂಸ್ಕೃತಿಕ ನಗರಿಯಲ್ಲಿ ಕೂಡ ಪ್ರತಭಟನೆ ಜೋರಾಗಿದ್ದು ಮೈಸೂರು-ಊಟಿ ಹೆದ್ದಾರಿ ತಡೆದು ಬಿಸಿ ಮುಟ್ಟಿಸಿದ್ದಾರೆ.ಸಂಯುಕ್ತ ಕಿಸಾನ್ ಮೋರ್ಚಾ,ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಗೋವುಗಳನ್ನು ರಸ್ತೆಗೆ‌ ತಂದು ನಿಲ್ಲಿಸಿ ರೈತರು ಆಕ್ರೋಶ ಹೊರಹಾಕಿದ್ದಾರೆ.

Share This Article
Leave a comment