December 22, 2024

Newsnap Kannada

The World at your finger tips!

supreme , government , order

ಹಿಜಬ್ ನಿಷೇಧ: ಅರ್ಜಿದಾರರ ವಿರುದ್ಧ ಸುಪ್ರೀಂಕೋರ್ಟ್ ಗರಂ – ರಾಜ್ಯ ಸರ್ಕಾರ, ಅರ್ಜಿದಾರರಿಗೆ ನೋಟಿಸ್

Spread the love

ಶಾಲಾ-ಕಾಲೇಜಿನ ತರಗತಿಗಳಲ್ಲಿ ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರ ಮತ್ತು ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿದೆ.

ವಿಚಾರಣೆ ಮುಂದೂಡಲು ನಿರಾಕರಿಸಿದ ಸುಪ್ರೀಂಕೋರ್ಟ್ ಸೆಪ್ಟೆಂಬರ್ 5 ಕ್ಕೆ ಅಂತಿಮ ವೇಳೆ ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ.ಇದನ್ನು ಓದಿ –ಮಾಲ್ ನಲ್ಲಿ ನಮಾಜ್ : ಭಜರಂಗದಳದಿಂದ ಹನುಮಾನ್ ಚಾಲೀಸಾ ಪಠಣ 

ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಸೋಮವಾರ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು.

ನ್ಯಾ. ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿ ವಿಚಾರಣೆ ಮುಂದೂಡುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಧ್ಯಪ್ರದೇಶ ಮಾಡಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅರ್ಜಿದಾರರು ಈ ಹಿಂದೆ ಆರು ಬಾರಿ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಈಗ ವಿಚಾರಣೆ ವೇಳೆ ಮುಂದೂಡಿಕೆಗೆ ಮನವಿ ಮಾಡುತ್ತಿದ್ದಾರೆ. ಇದು ಸರಿಯಲ್ಲ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.

Copyright © All rights reserved Newsnap | Newsever by AF themes.
error: Content is protected !!