ಹಿಜಬ್, ಶಿಕ್ಷಣದ ಆಯ್ಕೆಗೆ ಕಾಲೇಜುಗಳ ಬಲವಂತ : ಮಲಾಲಾ ಯೂಸುಫ್

Team Newsnap
1 Min Read

ಹಿಜಬ್, ಶಿಕ್ಷಣ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜು ಬಲವಂತ ಮಾಡುತ್ತಿದೆ.

ತರಗತಿಯ ಒಳಗೆ ಬಿಡದೆ ಇರುವುದು ನಿಜಕ್ಕೂ ಭಯಾನಕವಾಗಿದೆ ಎಂದು ಹೆಣ್ಣು ಮಕ್ಕಳ ಶಿಕ್ಷಣ ಹೋರಾಟಗಾರ್ತಿ, ನೊಬೆಲ್ ಪ್ರಶಸ್ತಿ ಪುರಸ್ಕೃತೆ ಪಾಕಿಸ್ತಾನದ ಮಲಾಲಾ ಯೂಸುಫ್ ಝಾಯಿ ಕರ್ನಾಟಕದ ಹಿಜಾಬ್ ವಿವಾದದ ಬಗ್ಗೆ ಟ್ವಟ್ಟರ್ ಮಾತನಾಡಿದ್ದಾರೆ.

bojegowda birth

ಹಿಜಾಬ್​ ಅಥವಾ ಶಿಕ್ಷಣ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜು ಬಲವಂತ ಮಾಡುತ್ತಿದೆ. ಹಿಜಾಬ್ ಧರಿಸಿಬಂದಿದ್ದಾರೆ ಎಂಬ ಕಾರಣಕ್ಕೆ ಹೆಣ್ಣುಮಕ್ಕಳನ್ನು ಕ್ಲಾಸ್​ ಒಳಗೆ ಬಿಡದೆ ಇರುವುದು ನಿಜಕ್ಕೂ ಭಯಾನಕ. ಹುಡುಗಿಯರು ಹೆಚ್ಚು ಬಟ್ಟೆ ಧರಿಸುವುದಕ್ಕೆ ಮತ್ತು ಕಡಿಮೆ ಬಟ್ಟೆ ಧರಿಸುವುದಕ್ಕೆ ಆಕ್ಷೇಪಣೆ ವ್ಯಕ್ತಪಡಿಸುವುದು ಯಾವಾಗಿನಿಂದಲೂ ಇದ್ದೇಇದೆ. ಆದರೆ ಹಿಜಾಬ್​​ ಧರಿಸಿ ಬರುತ್ತಾರೆಂದು ಮುಸ್ಲಿಂ ಮಹಿಳೆಯರನ್ನು ತುಚ್ಛವಾಗಿ ಕಾಣಬಾರದು ಎಂದು ಹೇಳಿದ್ದಾರೆ.

Share This Article
Leave a comment