ಹಿಜಾಬ್ ವಿದ್ಯಾರ್ಥಿಗಳ ಕಿರಿಕ್: ಸೌದಿ, ಪಾಕಿಸ್ತಾನಕ್ಕೆ ಹೋಗ್ಲಿ – ಆಗ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ : ಖಾದರ್

Team Newsnap
1 Min Read
UT Khader is the new Speaker - Unanimous choice ಯು.ಟಿ ಖಾದರ್ ನೂತನ ಸ್ಪೀಕರ್ - ಸರ್ವಾನುಮತದ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕ ಯು.ಟಿ ಖಾದರ್ ಮಂಗಳೂರಿನಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರಿಗೆ ಬುದ್ದಿಮಾತು ಹೇಳಿದ್ದಾರೆ‌‌‌.

ಇದನ್ನು ಓದಿ –ಜಾಮಿಯಾ ವಿವಾದ : ಟಿಪ್ಪು ಕಾಲದಲ್ಲೇ ಅರ್ಚಕರ ಕೈ ಕತ್ತರಿಸಿ, ಆಂಜನೇಯ ವಿಗ್ರಹವನ್ನು ನದಿಗೆ ಎಸೆದ ಅಂಶ ಬಯಲಿಗೆ

ವಾರದ ಹಿಂದೆಯಷ್ಟೇ ನಾವು ನಮ್ಮ ಸಮಸ್ಯೆ ಹೇಳಲು ಹೋಗಿದ್ದಾಗ ಶಾಸಕ ಯು. ಟಿ. ಖಾದರ್ ಕ್ರಿಕೆಟ್ ಆಟದಲ್ಲಿ ಬ್ಯುಸಿ ಇದ್ದರು ಎಂಬ ಹಿಜಾಬ್ ವಿದ್ಯಾರ್ಥಿನಿಯರು ಆರೋಪ ಮಾಡಿದ್ದರು. ಇದನ್ನು ಅಲ್ಲಗಳೆದಿದ್ದ ಖಾದರ್, ‘ವಿದ್ಯಾರ್ಥಿನಿಯರು ದುರುದ್ದೇಶ ಪೂರಿತವಾಗಿ ಹೇಳಿಕೆ ಕೊಟ್ಟಿದ್ದಾರಾ?, ರಾಜಕೀಯ ಪ್ರೇರಿತವಾಗಿ ಹೇಳಿಕೆ ಕೊಟ್ಟಿದ್ದಾರಾ? ಏನು ಅಂತಾ ವಿಚಾರ ಗೊತ್ತಿಲ್ಲ. ಅವರ ಹೇಳಿಕೆಯ ಹಿನ್ನೆಲೆಯನ್ನು ತಿಳಿದುಕೊಳ್ಳಬೇಕಾಗುತ್ತದೆ. ನನಗೆ ಕಾಲ್ ಬಂದಾಗ ನನ್ನಿಂದಾದ ನೆರವು ನೀಡಿದ್ದೇನೆ, ಜಿಲ್ಲಾಧಿಕಾರಿ ಜೊತೆ ಮಾತುಕತೆಗೆ ಸಹಾಯ ಮಾಡಿದ್ದೇನೆ’ ಎಂದಿದ್ದರು.

ದೇಶದ ಕಾನೂನಿನ ಪ್ರಕಾರವಾಗಿ ನಾನು ಅವರಿಗೆ ಸಹಾಯ ಮಾಡಿದ್ದೇನೆ. ಶಿಕ್ಷಣ ಎಲ್ಲರಿಗೂ ಪ್ರಮುಖವಾಗಿದೆ. ಅದರಲ್ಲೂ ಹೆಣ್ಣು ಮಕ್ಕಳಿಗೆ ಶಿಕ್ಷಣದ ಅಗತ್ಯ ಬಹಳಷ್ಟಿದೆ. ವಿದ್ಯಾರ್ಥಿನಿಯರಿಗೆ ಕಾನೂನು ವ್ಯಾಪ್ತಿಯಲ್ಲಿ ಯಾವೆಲ್ಲಾ ಸಹಕಾರ ಮಾಡಬಹುದು, ಅದನ್ನು ನಾನು ಮಾಡಿದ್ದೇನೆ.

‘ಹಿಜಾಬ್ ವಿದ್ಯಾರ್ಥಿನಿಯರು ಒಮ್ಮೆ ಪಾಕಿಸ್ಥಾನ, ಸೌದಿಯಂತಹ ದೇಶಗಳಿಗೆ ಹೋಗಲಿ. ಆಗ ನಮ್ಮ‌ ದೇಶದ ಮಹತ್ವ ಗೊತ್ತಾಗುತ್ತದೆ. ಇಲ್ಲಿ ಬೇಕಾದ ಹಾಗೆ ಮಾತನಾಡೋದು, ಡಿಸಿಯನ್ನು ಭೇಟಿಯಾಗೋದು, ಪ್ರೆಸ್ ಮೀಟ್ ಎಲ್ಲಾ ಮಾಡಬಹುದು. ಆದರೆ ಅದನ್ನೇ ವಿದೇಶಕ್ಕೆ ಹೋಗಿ ಮಾತನಾಡಲಿ. ಇಲ್ಲಿ‌ ಹುಲಿಯ ಹಾಗೆ ಇದ್ದವರು ಅಲ್ಲಿ ಬೆಕ್ಕಿನ ತರಹ ಆಗುತ್ತಾರೆ. ಆಗ ನಮ್ಮ ದೇಶದ ಕಾನೂನು ನೀಡಿದ ಅವಕಾಶದ ಮಹತ್ವ ಗೊತ್ತಾಗುತ್ತದೆ. ಇಲ್ಲಿ ಸಿಗುವ ಸ್ವಾತಂತ್ರ್ಯದ ಅರಿವು ಆಗುತ್ತದೆ’ ಎಂದು ಹಿಜಾಬ್ ವಿದ್ಯಾರ್ಥಿನಿಯರಿಗೆ ಯು. ಟಿ. ಖಾದರ್ ಬುದ್ದಿಮಾತು ಹೇಳಿದ್ದಾರೆ.

Share This Article
Leave a comment