ಹಸಿರು ಪಟಾಕಿ ಹೊಡೆಯಿರಿ : ಸಾಪ್ಟ್ ಆದ ಸಿಎಂ ಬಿಎಸ್‍ವೈ

Team Newsnap
1 Min Read

ಪಟಾಕಿ ಮಾರಾಟ ಹಾಗೂ ಸಿಡಿಸುವುದನ್ನು ನಿಷೇಧಿಸುವುದಾಗಿ ಘೋಷಿಸಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಸ್ವಲ್ಪ‌ ಸಾಪ್ಟ್ ನಿರ್ಧಾರ ತಳೆದಿದ್ದಾರೆ.

ಸಾರ್ವಜನಿಕರ ಒತ್ತಡಕ್ಕೆ ಮಣಿದ ಯಡಿಯೂರಪ್ಪ “ಹಸಿರು ಪಟಾಕಿ” ಮಾರಾಟ ಮತ್ತು ಸಿಡಿಸಲು ಅವಕಾಶ ನೀಡಿದ್ದಾರೆ.

ಕೋವಿಡ್ -19 ಮತ್ತು ಉಸಿರಾಟದ ಸೋಂಕಿಗೆ ಒಳಗಾಗುವವರ ಸುರಕ್ಷತೆಯ ದೃಷ್ಟಿಯಿಂದ, ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಮತ್ತು ಸಿಡಿಸಲು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಶುಕ್ರವಾರ ಸಂಜೆ ಆದೇಶ ಹೊರಡಿಸಿದ್ದಾರೆ.

ಈ ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದ ನಂತರ ನಾವು ಅನೇಕ ಸಲಹೆಗಳನ್ನು ಸ್ವೀಕರಿಸಿದ್ದೇವೆ. ಜನರು ತಮ್ಮ ಮಕ್ಕಳ ಮತ್ತು ತಮ್ಮ ಸುರಕ್ಷತೆಯನ್ನು ಪರಿಗಣಿಸಿ ಸರಳ ರೀತಿಯಲ್ಲಿ ಆಚರಿಸಬೇಕು. ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಿ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಬೇಕೆಂದು ನಾನು ವಿನಂತಿಸುತ್ತೇನೆ ”ಎಂದು ಯಡಿಯೂರಪ್ಪ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪಟಾಕಿ ನಿಷೇಧಿಸುವುದಾಗಿ ಯಡಿಯೂರಪ್ಪ ಹೇಳಿದ ಬೆನ್ನಿಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪರಿಸರವಾದಿಗಳು ಪಟಾಕಿ ನಿಷೇಧದ ನಿರ್ಧಾರವನ್ನು ಸ್ವಾಗತಿಸಿದರೆ, ಇನ್ನೂ ಕೆಲವರು ಸರ್ಕಾರದ ನಿರ್ಧಾರವನ್ನು ಹಿಂದೂ ವಿರೋಧಿಯೆಂದು ಕರೆದಿದ್ದಾರೆ. ಹಿಂದೂ ವಿರೋಧಿ ಪಟ್ಟ ಹೊರಲು ಬಯಸದ ಯಡಿಯೂರಪ್ಪ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ, ಹಸಿರು ಪಟಾಕಿಗೆ ಅವಕಾಶ ಕೊಡುವುದಾಗಿ ಹೇಳಿದ್ದಾರೆ.

Share This Article
Leave a comment