ಮುಂಬರುವ ದಕ್ಷಿಣ ಆಫ್ರಿಕಾ ಸರಣಿಗಾಗಿ ಟೀಮ್ ಇಂಡಿಯಾ
ಏಕದಿನ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.
ಏಕದಿನ ಹಾಗೂ ಟಿ20 ತಂಡಕ್ಕೆ ಹಿಟ್ಮ್ಯಾನ್ ರೋಹಿತ್ ಶರ್ಮಗೆ ನಾಯಕ ಸ್ಥಾನ ನೀಡಲಾಗಿದೆ.
ಈ ಹಿಂದೆ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದರು. ಇದಾಗ್ಯೂ ಕೊಹ್ಲಿ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯುವುದಾಗಿ ತಿಳಿಸಿದ್ದರು.
ವಿರಾಟ್ ಕೊಹ್ಲಿಯನ್ನು ಏಕದಿನ ತಂಡದ ನಾಯಕ ಸ್ಥಾನದಿಂದ ಕೂಡ ಕೆಳಗಿಳಿಸಲಾಗಿದೆ. ಬದಲಿಗೆ ರೋಹಿತ್ ಶರ್ಮಾ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ. ಇನ್ನು ಕೊಹ್ಲಿ ಟೆಸ್ಟ್ ತಂಡದ ಕ್ಯಾಪ್ಟನ್ ಆಗಿ ಮಾತ್ರ ಮುಂದುವರೆಯಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ತಿಳಿಸಿದೆ.
ಸೀಮಿತ ಓವರ್ಗಳ ತಂಡದ ಸಂಪೂರ್ಣ ಜವಾಬ್ದಾರಿ ರೋಹಿತ್ ಶರ್ಮಾ ನೀಡಲಾಗಿದೆ.
ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯಲಿದ್ದಾರೆ, ಅದರಂತೆ ದಕ್ಷಿಣ ಆಫ್ರಿಕಾ ಸರಣಿಯಲ್ಲೂ ಅವರು ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ.
ದಕ್ಷಿಣ ಆಫ್ರಿಕಾ ಸರಣಿ ಇದೇ ಡಿಸೆಂಬರ್ 26 ರಿಂದ ಶುರುವಾಗಲಿದೆ.
ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 ಸೆಂಚುರಿಯನ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಎರಡನೇ ಟೆಸ್ಟ್ ಜನವರಿ 3 ರಿಂದ 07 ಜೋಹಾನ್ಸ್ ಬರ್ಗ್ನಲ್ಲಿ
ಮೂರನೇ ಟೆಸ್ಟ್ ಜನವರಿ 11 ರಿಂದ 15 ಕೇಪ್ ಟೌನ್ನಲ್ಲಿ ನಡೆಯಲಿದೆ.
ಅದೇ ರೀತಿ ಮೂರು ಪಂದ್ಯಗಳ ಏಕದಿನ ಸರಣಿ ಕೂನಡೆಯಲಿದೆ
- ಮೊದಲ ಏಕದಿನ ಪಂದ್ಯ ಜನವರಿ 19 (ಪಾರ್ಲ್, ಸಮಯ – 2.00 PM),
- 2ನೇ ಏಕದಿನ ಪಂದ್ಯ- ಜನವರಿ 21, (ಪಾರ್ಲ್, ಸಮಯ – 2.00 PM),
- 3ನೇ ಏಕದಿನ ಪಂದ್ಯ- 23 ಜನವರಿ ಕೇಪ್ ಟೌನ್ನಲ್ಲಿ ನಡೆಯಲಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ