December 23, 2024

Newsnap Kannada

The World at your finger tips!

flag,hoisting,independence day

Hoisting of the flag at Chamarajpet ground by the government itself - order

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ – ಆದೇಶ

Spread the love

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಾದಿತ ಚಾಮರಾಜಪೇಟೆ ಆಟದ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ಮಾಡುವ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದೆ.

ಸರ್ವೇ ನಂಬರ್ 40, ಗುಟ್ಟಹಳ್ಳಿ, ಚಾಮರಾಜಪೇಟೆ ಬಡಾವಣೆ ಸ್ವತ್ತಿನ ಸಂಖ್ಯೆ 147ರ ಆಟದ ಮೈದಾನದಲ್ಲಿ ಧ್ವಜಾರೋಹಣ ನೆರೆವೇರಿಸಲಾಗುವುದು ಎಂದು ಬೆಂಗಳೂರು ಉತ್ತರ ಉಪವಿಭಾಗದ ಅಧಿಕಾರಿ ಆದೇಶ ಹೊರಡಿಸಿದ್ದಾರೆ.ಇದನ್ನು ಓದಿ –ನಿನ್ನೆ ಸಹಪಾಠಿಗಳ ಜೊತೆ ಜಗಳ – ಇಂದು ಕೊಲೆಯಲ್ಲಿ ಅಂತ್ಯ

ಚಾಮರಾಜಪೇಟೆ ಮೈದಾನವನ್ನು ಈದ್ಗಾ ಮೈದಾನ ಎಂದು ಸರ್ಕಾರ ಎಲ್ಲಿಯೂ ಉಲ್ಲೇಖಿಸಿಲ್ಲ ಪ್ರಸ್ತುತ ದಿನಗಳಲ್ಲಿ ಈದ್ಗಾ ಮೈದಾನ ಭಾರಿ ವಿವಾದಕ್ಕೆ ಕಾರಣವಾಗಿದೆ.

ಈ ಮೈದಾನ ತಮಗೆ ಸೇರಿದ್ದು ಎಂದು ವಕ್ಫ್‌ ಬೋರ್ಡ್‌ ವಾದಿಸುತ್ತಿದೆ. ಆದರೆ ಇದು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಹೇಳುತ್ತಿದೆ.

ಈದ್ಗಾ ಮೈದಾನ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಹಿಂದೂಪರ ಸಂಘಟನೆಗಳು, ಮೈದಾನದಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಪಟ್ಟು ಹಿಡಿದಿವೆ. ಅಲ್ಲದೇ ಸ್ವಾತಂತ್ರ್ಯ ದಿನಾಚರಣೆ ವೇಳೆಯೂ ಧ್ವಜಾರೋಹಣಕ್ಕೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಇತ್ತ ಮುಸ್ಲಿಮರು ಕೂಡ ನಾವು ಧ್ವಜಾರೋಹಣ ಮಾಡುತ್ತೇವೆ ಎಂದು ಹೇಳಿದ್ದರು. ಇದಕ್ಕೆ ಅವಕಾಶ ಕಲ್ಪಿಸಿದರೆ ಶಾಂತಿಭಂಗವಾಗುವ ಭೀತಿಯಿಂದಾಗಿ ಸರ್ಕಾರದ ನೇತೃತ್ವದಲ್ಲೇ ಧ್ವಜಾರೋಹಣ ನಡೆಸಲು.

Copyright © All rights reserved Newsnap | Newsever by AF themes.
error: Content is protected !!