ಬಣ್ಣದಾಟದ ನಂತರ ನದಿಗೆ ಸ್ನಾನಕ್ಕೆಂದು ತೆರಳಿದ್ದ ವೇಳೆ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಓರ್ವ ಬಾಲಕ ತೀವ್ರ ಅಸ್ವಸ್ಥಗೊಂಡ ಘಟನೆ ಹಾವೇರಿ
ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವರದಾ ನದಿಯಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಬಾಲಕರನ್ನು ಮಹೇಶ್ ಮುರಡಣ್ಣನವರ್ (10), ವೀರೇಶ್ ಅಕ್ಕಿವಳ್ಳಿ (10) ಎಂದು ಗುರುತಿಸಲಾಗಿದೆ.
ಯೋಗೇಶ್ ಎಂಬ 7 ವರ್ಷದ ಬಾಲಕ ತೀವ್ರ ಅಸ್ವಸ್ಥಗೊಂಡಿದ್ದಾನೆ. ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಇಬ್ಬರು ಬಾಲಕರ ದೇಹಗಳನ್ನು ಸ್ಥಳೀಯರು ವರದಾ ನದಿಯಿಂದ ಹೊರ ತೆಗೆದಿದ್ದಾರೆ.
ಹಾವೇರಿ ಗ್ರಾಮಾಂತರ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ಥಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ