ಗೆಜ್ಜಲಗೆರೆಯ ಮನ್ಮುಲ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಮೆಗಾ ಡೈರಿ ಉದ್ಘಾಟನೆ

Team Newsnap
1 Min Read

ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಮಂಡ್ಯದ ಮನ್ಮುಲ್‌ನಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗಿರುವ ಮೆಗಾ ಡೈರಿಯನ್ನು ಉದ್ಘಾಟಿಸಿದರು.

ಸಕ್ಕರೆ ನಾಡಿಗೆ ಬಂದಿಳಿದ ಅಮಿತ್ ಶಾ ಅವರನ್ನು ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.ಬೆಂಗಳೂರಿನಲ್ಲಿ ಸಿಐಡಿ DIG R. ದಿಲೀಪ್ ಹೃದಯಾಘಾತದಿಂದ ಸಾವು

ಮದ್ದೂರು ತಾಲೂಕಿನ ಹುಲಿಗೆರೆಪುರ ಹೆಲಿಪ್ಯಾಡ್‌ಗೆ ಹೆಲಿಕಾಫ್ಟರ್ ಮೂಲಕ ಆಗಮಿಸಿದ ಅವರು ಬಳಿಕ ರಸ್ತೆ ಮಾರ್ಗವಾಗಿ ಮಂಡ್ಯದ ವಿವಿ ಆವರಣ ತಲುಪಿದ್ದಾರೆ. ಅಮಿತ್ ಶಾ ಅವರಿಗೆ ಅಪ್ಪಟ ರೇಷ್ಮೆ ಬಳಸಿ ತಯಾರಿಸಲಾಗಿರುವ ಮೈಸೂರು ಪೇಟವನ್ನು ಸ್ವಾಗತದ ವೇಳೆ ತೊಡಿಸಲಾಗಿದೆ. ಸರ್ದಾರ್ ವಲ್ಲಭಭಾಯಿ ಪಟೇಲರ ಬೆಳ್ಳಿಯಲ್ಲಿ ತಯಾರಾಗಿರುವ ಪ್ರತಿಮೆಯನ್ನೂ ಉಡುಗೊರೆಯಾಗಿ ನೀಡಲಾಗಿದೆ.

ಅಮಿತ್ ಶಾ ಅವರು ಉದ್ಘಾಟಿಸಿರುವ ಮೆಗಾ ಡೈರಿ ಸುಮಾರು 260 ಕೋಟಿ ರೂ. ವೆಚ್ಚದಲ್ಲಿ ಸಿದ್ಧವಾಗಿದೆ. 10-14 ಲಕ್ಷ ಲೀ. ಹಾಲು ಸಂಸ್ಕರಣಾ ಸಾಮರ್ಥ್ಯವನ್ನು ಇದು ಹೊಂದಿದ್ದು, 30 ಮೆಟ್ರಿಕ್ ಟನ್ ಹಾಲಿನ ಪುಡಿ ಉತ್ಪಾದಿಸುವ ಸಾಮರ್ಥ್ಯವನ್ನೂ ಇದು ಹೊಂದಿದೆ. 2 ಲಕ್ಷ ಲೀ. ಯುಹೆಚ್‌ಡಿ ಹಾಲನ್ನು ಪ್ಯಾಕ್ ಮಾಡಬಹುದಾದ ಕಟ್ಟಡ ಇದಾಗಿದ್ದು, ಇಲ್ಲಿ ಬೆಣ್ಣೆ, ತುಪ್ಪ, ಪೇಡ, ಬರ್ಫಿ, ಕೋವಾ, ಲಾಡು, ಬೆಲ್ಲದ ಬರ್ಫಿ, ಮೊಸರು, ಮಜ್ಜಿಗೆ ತಯಾರಿಕಾ ಘಟಕವೂ ಇದೆ. ಮೆಗಾ ಡೈರಿಯಿಂದಾಗಿ ಮಂಡ್ಯ ಜಿಲ್ಲೆಯ 99 ಸಾವಿರ ರೈತರಿಗೆ ಅನುಕೂಲವಾಗಲಿದೆ.

ಉದ್ಘಾಟನೆ ಬಳಿಕ ಮಾತನಾಡಿದ ಅಮಿತ್ ಶಾ, ಸಹಕಾರಿಗಳಿಗೆ, ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಮಂಡ್ಯ ಮೆಗಾ ಡೈರಿ ಉದ್ಘಾಟನೆ ಆಗಿದೆ. 260 ಕೋಟಿ ರೂ. ವೆಚ್ಚದಲ್ಲಿ ಮಿಲ್ಕ್ ಫ್ಲಾಂಟ್ ನಿರ್ಮಾಣ ಆಗಿದೆ. ಪ್ರತಿದಿನ 10 ಲಕ್ಷ ಲೀ. ಹಾಲು ಸಂಸ್ಕರಣೆ ಆಗುತ್ತದೆ. ಮುಂದಿನ ದಿನಗಳಲ್ಲಿ 14 ಲಕ್ಷ ಲೀ. ಸಂಸ್ಕರಣೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಅಮಿತ್ ಶಾ ಭಾಷಣವನ್ನು ಕನ್ನಡಕ್ಕೆ ಅನುವಾದಿಸುತ್ತಿದ್ದ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬರಡು ನೆಲದಲ್ಲೂ ಕಮಲ ಅರಳಿಸುವುದು ಅಮಿತ್ ಶಾಗೆ ಗೊತ್ತಿದೆ. ಅದಕ್ಕೆ ಅವರನ್ನು ಚುನಾವಣಾ ಚಾಣಾಕ್ಷ ಎನ್ನುತ್ತಾರೆ ಎಂದು ಹೊಗಳಿದರು.

Share This Article
Leave a comment