ಚನ್ನಪಟ್ಟಣ ಮೂಲದ ಕಾಂಗ್ರೆಸ್ ನಾಯಕಿ ಹಾಗೂ ಸಂಸದ ಡಿ ಕೆ ಸುರೇಶ್ ಅಪ್ತೆ ನವ್ಯಶ್ರೀ ಎಂಬ ಯುವತಿ ಗೆಳೆಯನೊಂದಿಗೆ ಸೇರಿಕೊಂಡು ಹನಿಟ್ರ್ಯಾಪ್ ನಡೆಸಿದ್ದಾರೆನ್ನಲಾದ ಪ್ರಕರಣ ಬೆಳಕಿಗೆ ಬಂದಿದೆ.
ಹನಿಟ್ರ್ಯಾಪ್ ನಿಂದಾಗಿ ತನಗೆ ಜೀವ ಬೆದರಿಕೆ ಇರುವುದಾಗಿ ಬೆಳಗಾವಿ ತೋಟಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ಕಾಂಗ್ರೆಸ್ ನಾಯಕಿ ವಿರುದ್ಧ ತಡರಾತ್ರಿಯೇ ಬೆಳಗಾವಿಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರ ರಾವ್ ಹಾಗೂ ಆಪ್ತ ತಿಲಕ್ ವಿರುದ್ಧ ತಡರಾತ್ರಿಯೇ ದೂರು ನೀಡಲಾಗಿದೆ.
ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ನವ್ಯಶ್ರೀ ವಿರುದ್ಧ IPC ಸೆಕ್ಷನ್ 384, 448, 504, 506, 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳದಲ್ಲಿ NEET ಪರೀಕ್ಷಾ ವಿದ್ಯಾರ್ಥಿನಿಯರ ಒಳಉಡುಪು ತೆಗೆಸಿದ ಪ್ರಕರಣ- ತನಿಖೆ ಆರಂಭ
ರೀಲ್ಸ್. ರಾಣಿ ಎಂದೇ ಖ್ಯಾತಿಯಾಗಿರುವ ನವ್ಯಶ್ರೀ ನನಗೆ ಮಾನಸಿಕ ಚಿತ್ರಹಿಂಸೆ ನೀಡುತ್ತಿದ್ದಾರೆ, ಸುಳ್ಳುಕೇಸ್ ನೀಡಿ ಮಾನಹಾನಿ ಮಾಡಿ ಜೈಲಿಗೆ ಕಳುಹಿಸುವುದಾಗಿ ಹೆದರಿಸುತ್ತಿದ್ದಾರೆ. ಜೊತೆಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಅವರಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು