ಮಾಜಿ ಸಚಿವ ರಮೇಶ್ಗೆ ಹನಿಟ್ರಾಪ್ ; ಡಿಕೆಶಿ, ಲಕ್ಷ್ಮೀ ವಿರುದ್ದ 500 ರು ಕೋಟಿ ಅಕ್ರಮ ವ್ಯವಹಾರ: ಇಡಿ ದೂರು

Team Newsnap
1 Min Read

ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 500 ಕೋಟಿ ಅಕ್ರಮ‌‌ ವ್ಯವಹಾರ ನಡೆದಿದೆ. ಈ ವ್ಯವಹಾರದಲ್ಲಿ ನೇರ ಪಾತ್ರವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಜಾರಿ ನಿರ್ದೇಶನಾಲಯ ಕ್ಕೆ ದೂರು ನೀಡಲಾಗಿದೆ.

ಬೆಂಗಳೂರಿನ ಬನಶಂಕರಿ ನಿವಾಸಿ ಶ್ರೀಧರ್ ಮೂರ್ತಿ ಎಂಬುವವರು ಡಿಕೆ ಶಿವಕುಮಾರ್, ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ವಿಜಯ್ ಮುಳಗುಂದ, ಶಂಕಿತ ಮಾಜಿ ಪತ್ರಕರ್ತ ನರೇಶ್ ಗೌಡ ಸೇರಿ ಐವರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.

ಹನಿಟ್ರ್ಯಾಪ್ ಹಾಗೂ ಒಳಸಂಚಿಗೆ ಸುಮಾರು 500 ಕೋಟಿ ರೂ. ಅಕ್ರಮ ವ್ಯವಹಾರ ನಡೆದಿದೆ, ಇಸಿಐಆರ್ ದಾಖಲಿಸಿಕೊಂಡು ತನಿಖೆ ಮಾಡಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ನೀಡಿರುವ ದೂರು ಆಧರಿಸಿ ತನಿಖೆ ನಡೆಸಬೇಕು. ಸಿಡಿ ಪ್ರಕರಣದಲ್ಲಿ ಜಾರಕಿಹೊಳಿಯನ್ನು ಸಿಲುಕಿಸಲು ಹನಿಟ್ರ್ಯಾಪ್ ಮಾಡಲಾಗಿದೆ. ಇದಕ್ಕಾಗಿ ಸುಮಾರು 500 ಕೋಟಿ ರು. ಖರ್ಚು ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ‌.

ಇಸಿಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ದೆಹಲಿಯ ಇಡಿ ನಿರ್ದೇಶಕ ಹಾಗೂ ಬೆಂಗಳೂರಿನ ಜಂಟಿ ನಿರ್ದೇಶಕರಿಗೆ ಶ್ರೀಧರ್ ಮೂರ್ತಿ ದೂರು ನೀಡಿದ್ದಾರೆ.

Share This Article
Leave a comment