‘ಆಶಾ ಕಾರ್ಯಕರ್ತೆ’ಯರ ಗೌರವಧನ 7 ಸಾವಿರ ರೂ.ಗೆ ಹೆಚ್ಚಳ

Team Newsnap
1 Min Read

ಬೆಂಗಳೂರು : ರಾಜ್ಯ ಸರ್ಕಾರ ಆಶಾ ಕಾರ್ಯಕರ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ 7 ಸಾವಿರ ರೂ. ಗೆ ಹೆಚ್ಚಳ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು ,ಇಂದು ಅವರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು ಶೀಘ್ರದಲ್ಲೇ ರಾಜ್ಯದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ನೀಡುವ 5 ಸಾವಿರ ರೂ. ಜೊತೆಗೆ 2 ಸಾವಿರ ರೂ. ಸೇರಿಸಿ ಒಟ್ಟು 7 ಸಾವಿರ ರೂ. ನೀಡಲಾಗುವುದು.‌

ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನು ಪರಿಗಣಿಸಿ ಪ್ರೋತ್ಸಾಹ ಧನವನ್ನು ಪಾರದರ್ಶಕವಾಗಿ ನೀಡಲಾಗುವುದು.

ಈಗಾಗಲೇ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯಡಿ ನೀಡುವ 2 ಸಾವಿರ ರೂ. ಆಶಾ ಕಾರ್ಯಕರ್ತೆಯರಿಗೂ ಅನ್ವಯ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ.ಮಂಡ್ಯ ಅಭ್ಯರ್ಥಿ ಆಯ್ಕೆ ಅಧಿಕಾರ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಟ್ಟ ಮಾಜಿ ಪ್ರಧಾನಿಗಳು

ಆರೋಗ್ಯ ವಿಮೆಯನ್ನು 5 ಲಕ್ಷ ಆಶಾ ಕಾರ್ಯಕರ್ತೆಯರಿಗೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article
Leave a comment