December 21, 2024

Newsnap Kannada

The World at your finger tips!

police 1

ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು

Spread the love

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿಯಲ್ಲಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಪ್ರಣವ್, ಆಕಾಶ್, ಮತ್ತು ಆದರ್ಶ್ ಎಂದು ಗುರುತಿಸಲಾಗಿದೆ. ಈ ಮೂವರೂ ಬೆಂಗಳೂರಿನವರಾಗಿದ್ದು, ಮೈಸೂರು ಜಿಲ್ಲೆಯ ತಲಕಾಡಿಗೆ ಪ್ರವಾಸಕ್ಕೆ ಹೊರಟಿದ್ದಾಗ ಈ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಪೃಥ್ವಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಓವರ್ ಟೇಕ್ ಮಾಡಲು ಹೋಗಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ಮಾಹಿತಿಯಿದೆ.ಇದನ್ನು ಓದಿ –ಚುನಾವಣೆಗೂ ಮುನ್ನ ಕೇಜ್ರಿವಾಲ್‌ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ

ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಪ್ರಾರಂಭಿಸಿದ್ದಾರೆ. ಈ ದುರ್ಘಟನೆ ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

Copyright © All rights reserved Newsnap | Newsever by AF themes.
error: Content is protected !!