ಹಾಸನ ಬಳಿ ಭೀಕರ ರಸ್ತೆ ಅಪಘಾತ : ನಾಲ್ವರ ಸಾವು

Team Newsnap
1 Min Read
Horrible road accident near Hassan: Four dead ಹಾಸನ ಬಳಿ ಭೀಕರ ರಸ್ತೆ ಅಪಘಾತ : ನಾಲ್ವರ ಸಾವು #BREAKINGNEWS #hassan #Accident #NEWS

ಹಾಸನ: ಕಾರು – ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಮುಖಾಮಖಿ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಇಬ್ಬರು ಗಂಭೀರವಾಗಿ ಗಾಯ ಗೊಂಡ ಘಟನೆ ಹಾಸನ ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಜರುಗಿದೆ.

ಹಾಸನ ತಾಲೂಕು ಕುಪ್ಪಳಿ ಗ್ರಾಮದ ಚೇತನ್‌, ಗುಡ್ಡೇನಹಳ್ಳಿಯ ಅಶೋಕ್‌, ತಟ್ಟೆಕೆರೆಯ ಪುರುಷೋತ್ತಮ, ಆಲೂರು ತಾಲೂಕಿನ ಚಿಗಳೂರಿನ ದಿನೇಶ್‌ ಎಂಬುವವರು ಸಾವನ್ನಪ್ಪಿದ್ದಾರೆ.

ಹಾಸನದಿಂದ ಸಕಲೇಶಪುರಕ್ಕೆ ತೆರಳುತ್ತಿದ್ದ ಟಿಪ್ಪರ್ ಲಾರಿ ಹಾಗೂ ಸಕಲೇಶಪುರದಿಂದ ಹಾಸನಕ್ಕೆ ಬರುತ್ತಿದ್ದ ಇನ್ನೋವಾ ಕಾರಿನ ಮುಖಾಮುಖಿ ಡಿಕ್ಕಿಯಾಗಿವೆ.

ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.ಇಂದು ರಾತ್ರಿಯಿಂದಲೇ ಕೆ ಆರ್ ಎಸ್ ಆಣೆಕಟ್ಟೆಯಿಂದ ನದಿ- ನಾಲೆಗಳಿಗೆ ನೀರು ಬಿಡುಗಡೆ

ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಆಲೂರಿನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Share This Article
Leave a comment