ಮೈಸೂರಿನಲ್ಲಿ ಭೀಕರ ದುರಂತ ಸಂಭವಿಸಿದೆ.
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರು ಸ್ಥಳದಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.
ಮೈಸೂರಿನ ಟಿ.ಕೆ.ಬಡಾವಣೆಯ ರಮೇಶ್(40), ಉಷಾ(36), ಮೋನಿಷಾ(5) ಮೃತಪಟ್ಟವರು.
ಮೂರು ವರ್ಷದ ಸಿದ್ಧಾರ್ಥ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೈಸೂರಿನ ಎನ್.ಆರ್.ಸಂಚಾರ ಪೋಲಿಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮಾಡುತ್ತಿದ್ದಾರೆ.
ಅಪಘಾತ ಸಂಭವಿಸಿದ್ದು ಹೇಗೆ?
ಮೈಸೂರು- ಬೆಂಗಳೂರು ರಿಂಗ್ ರೋಡ್ ಜೆಂಕ್ಷನ್ ಬಳಿ ವೇಗವಾಗಿ ಬರುತ್ತಿದ್ದ ಕಾರು ರೋಡ್ ಡಿವೈಡರ್ ದಾಟಿ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಮೈಸೂರಿನ ಹೊರ ವಲಯದ ಸಿದ್ಧಲಿಂಗಪುರದಿಂದ ರಮೇಶ್ ಅತ್ತೆ ಮನೆಗೆ ಹೆಂಡತಿ ಮಕ್ಕಳೊಂದಿಗೆ ಬೈಕ್ ನಲ್ಲಿ ನಗರಕ್ಕೆ ವಾಪಸ್ಸು ಬರುವ ವೇಳೆ ಈ ದುರಂತ ಸಂಭವಿಸಿದೆ.
ಎನ್ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು