ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾದಂತಾಗಿದೆ . ಕಳೆದ ಮೂರು ತಿಂಗಳ ಹಿಂದೆಯೆ ಹೊರಟ್ಟಿ ಬಿಜೆಪಿ ತೊರೆಯುವುದಾಗಿ ಹೇಳಿದ್ದರು.
ಈ ಮಾತಿನಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಜತೆ ಹೊರಟ್ಟಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ನಂತರ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೆ ಯಾರಿಗೂ ಟಿಕೆಟ್ ಘೋಷಿಸಿಲ್ಲ. ಹೊರಟ್ಟಿ ಸೇರ್ಪಡೆ ಬಳಿಕ ಘೋಷಣೆ ಮಾಡಲು ನಿರ್ಧರಿಸಲಾಗಿತ್ತು.
ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯಿತ ನಾಯಕತ್ವ ಬಲಪಡಿಸಲು ಹಿರಿಯ ನಾಯಕ ಬಸವರಾಜ ಹೊರಟ್ಟಿಯವರನ್ನು ಪಕ್ಷಕ್ಕೆ ಕರೆತರಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು