ಲಕ್ನೋ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ಬೆಂಕಿ ಅವಘಡ ಸಂಭವಿಸಿ 10 ಮಕ್ಕಳು ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ.
ಈ ಘಟನೆ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾಗಿದ್ದು, ರಾತ್ರಿ 10:35ರ ಸುಮಾರಿಗೆ ಎನ್‌ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪುವ ಮುನ್ನವೇ ವೈದ್ಯರು ಮತ್ತು ಸಿಬ್ಬಂದಿ ಕಿಟಕಿಗಳನ್ನು ಒಡೆದು ಕೆಲ ಮಕ್ಕಳನ್ನು ಸ್ಥಳಾಂತರಿಸಿದರು.
ಘಟನೆಯಲ್ಲಿ 54 ಮಕ್ಕಳ ಪೈಕಿ 44 ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ದುರಂತದಲ್ಲಿ 10 ಮಕ್ಕಳು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಬಲಿಯಾದವರ ಪೈಕಿ ಏಳು ಮಕ್ಕಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವಿನಾಶ್ ಕುಮಾರ್ ತಿಳಿಸಿದ್ದಾರೆ. ಘಟನೆಯ ತನಿಖೆಗೆ ಕ್ರಮ ಕೈಗೊಳ್ಳಲಾಗಿದೆ.
ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಬ್ರಜೇಶ್ ಪಾಠಕ್ ಅವರ ಮಾಹಿತಿ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದ್ದು, ನಿರ್ಲಕ್ಷ್ಯದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು.ಇದನ್ನು ಓದಿ –ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಅಪಘಾತದಲ್ಲಿ ತಮ್ಮ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಹೃದಯವಿದ್ರಾವಕವಾಗಿತ್ತು. “ನನ್ನ ಮಗು ಸುಟ್ಟು ಸತ್ತುಹೋಯ್ತು,” ಎಂದು ರೋದಿಸುತ್ತಿರುವ ಪೋಷಕರ ದುಃಖ ದೃಶ್ಯ ಎಲ್ಲರನ್ನು ಮರುಗಿಸುವಂತಿತ್ತು.
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ