ಶಾಸಕ ಸಿಎಸ್ ಪುಟ್ಟರಾಜು, ಶಿವಲಿಂಗೇಗೌಡ ಸೇರಿದಂತೆ ಜೆಡಿಎಸ್ ತೊರೆದು ಅನೇಕರು ಕಾಂಗ್ರೆಸ್ ಸೇರಲಿದ್ದಾರೆಂದು ಮಾಗಡಿ ಮಾಜಿ ಶಾಸಕ ಹೆಚ್ ಸಿ. ಬಾಲಕೃಷ್ಣ ಹೇಳಿದರು.
ಬಿಡದಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಬಾಲಕೃಷ್ಣ ಪಕ್ಷದ ಮುಖಂಡರ ಏಳಿಗೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಹಿಸುವುದಿಲ್ಲ. ಪಕ್ಕದಲ್ಲಿ ಇರುವವರಿಗೆ ಮೊದಲು ಕುಮಾರಸ್ವಾಮಿ ಚುಚ್ಚುತ್ತಾರೆ. ಅವರು ಒಂದು ರೀತಿಯ
ಸ್ಲೋಪಾಯಿಸನ್ ಇದ್ದ ಹಾಗೆಎಂದು ಮಾಗಡಿ ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಕಿಡಿಕಾರಿದರು.
ಜೆಡಿಎಸ್ ಪಕ್ಷಕ್ಕೆ ನೆಲೆ ಇಲ್ಲ. ಈಗಾಗಲೇ ಹಲವು ಶಾಸಕರು ಜೆಡಿಎಸ್ ಬಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ. ಶಾಸಕರಾದ ಪುಟ್ಟರಾಜು, ಶಿವಲಿಂಗೇಗೌಡ ಸೇರಿದಂತೆ ಹಲವು ಶಾಸಕರು ಪಕ್ಷ ಬಿಡುತ್ತಾರೆ. ಪಕ್ಷದ ಮುಖಂಡರ ಏಳಿಗೆಯನ್ನು ಕುಮಾರಸ್ವಾಮಿ ಸಹಿಸುವುದಿಲ್ಲ. ಪಕ್ಕದಲ್ಲಿ ಇರುವವರಿಗೆ ಮೊದಲು ಕುಮಾರಸ್ವಾಮಿ ಚುಚ್ಚುತ್ತಾರೆ. ನಾನೂ ಕೂಡ ಅವರಿಂದ ಚುಚ್ಚಿಸಿಕೊಂಡಿದ್ದೇನೆ. ಕುಮಾರಸ್ವಾಮಿ ಸ್ಲೋ ಪಾಯಿಸನ್ ಇದ್ದ ಹಾಗೆ ಎಂದು ವಾಗ್ದಾಳಿ
ಮಾಡಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು