ಕಾಂಗ್ರೆಸ್ ಅಭ್ಯರ್ಥಿ K G F ಬಾಬು ಎಷ್ಟು ಶ್ರೀಮಂತ ? ಆತನ ಆಸ್ತಿ ವಿವರದ ಮಾಹಿತಿ ಇಲ್ಲಿದೆ

Team Newsnap
2 Min Read

ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಕೋಲಾರದ ಶ್ರೀಮಂತ ಅಭ್ಯರ್ಥಿಯೊಬ್ಬರು ಬೆಂಗಳೂರು ನಗರ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ.

‘ಕೆಜಿಎಫ್‌ ಬಾಬು’ ಎಂದೇ ಪ್ರಸಿದ್ಧಿ ಪಡೆದಿರುವ ಯೂಸೂಫ್‌ ಷರೀಫ್‌ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ

ಇದರಲ್ಲಿ ಏನೂ ವಿಶೇಷ ಇಲ್ಲ ಆದರೆ ಅವರ ಆಸ್ತಿ ಎಷ್ಟಿದೆ. ಗೊತ್ತಾ?
ಬರೋಬ್ಬರಿ 1,743 ಕೋಟಿ ರೂ. ಆಸ್ತಿ ಘೋಷಣೆ ಮಾಡಿದ್ದಾರೆ.

ರಾಜ್ಯದ ಚುನಾವಣೆಯ ಇತಿಹಾಸದಲ್ಲಿ ಹೊಸಕೋಟೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಂಟಿಬಿ ನಾಗರಾಜ್‌ ಶ್ರೀಮಂತ ಅಭ್ಯರ್ಥಿ ಎನಿಸಿಕೊಂಡಿದ್ದರು.

2019 ರಲ್ಲಿ ನಡೆದ ಉಪಚುನಾವಣೆಯ ವೇಳೆ ಎಂಟಿಬಿ 1200 ಕೋಟಿ ರೂ. ಆಸ್ತಿ ಘೋಷಿಸಿದ್ದರು.

ಈಗ ಎಂಟಿಬಿ ಹೆಸರಿನಲ್ಲಿದ್ದ ʼಶ್ರೀಮಂತ ಅಭ್ಯರ್ಥಿʼ ದಾಖಲೆಯನ್ನು ಯೂಸುಫ್‌ ಷರೀಫ್‌ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ.

ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಅವರಿಂದ ಯೂಸೂಫ್‌ ರೋಲ್ಸ್‌ ರಾಯ್ಸ್‌ ಕಾರು ಖರೀದಿಸಿದ್ದಾರೆ.

ಯೂಸೂಫ್‌ ಷರೀಫ್‌ ಅವರಿಗೆ ತಾಜ್‌ ಅಬ್ದುಲ್‌ ರಜಾಕ್‌, ಶಾಜಿಯಾ ತರನ್ನಮ್‌ ಹೆಸರಿನ ಇಬ್ಬರು ಪತ್ನಿಯರಿದ್ದಾರೆ, ಐದು ಮಕ್ಕಳನ್ನು ಹೊಂದಿದ್ದಾರೆ. ತಮ್ಮ ಮೇಲೆ ಒಟ್ಟು ನಾಲ್ಕು ಪ್ರಕರಣಗಳಿವೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆಸ್ತಿ ಎಷ್ಟಿದೆ?

100 ಕೋಟಿ ರೂ. ಮೌಲ್ಯದ ಚರಾಸ್ಥಿ ಹಾಗೂ 1,643.59 ಕೋಟಿ ರೂ. ಸ್ಥಿರಾಸ್ತಿ (ಒಟ್ಟು 1743 ಕೋಟಿ) ಹೊಂದಿರುವುದಾಗಿ ಬಾಬು ನಾಮಪತ್ರ ವೇಳೆ ಸಲ್ಲಿಸಲಾದ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಕೋಟ್ಯಂತರ ರೂ. ಮೌಲ್ಯದ ಸ್ಥಿರಾಸ್ತಿ:

ಬೆಂಗಳೂರಿನಲ್ಲಿ ನೂರಾರು ಎಕರೆ ಕೃಷಿ ಹಾಗೂ ಕೃಷಿಯೇತರ ಜಮೀನು ಹೊಂದಿರುವ ಯೂಸೂಫ್‌ ಷರೀಫ್‌ ತಮ್ಮ ಹೆಸರಿನಲ್ಲೇ 47.31 ಕೋಟಿ ರೂ. ಮೌಲ್ಯದ ಕೃಷಿಯೇತರ ಜಮೀನು ಹಾಗೂ ಪತ್ನಿಯ ಹೆಸರಿನಲ್ಲಿ 1.30 ಕೋಟಿ ರೂ. ಮೌಲ್ಯದ ಕೃಷಿಯೇತರ ಜಮೀನು ಹೊಂದಿದ್ದಾರೆ.

ಅಷ್ಟೇ ಅಲ್ಲದೇ 1,593.27 ಕೋಟಿ ರೂ. ಮೌಲ್ಯದ ಕೃಷಿಯೇತರ ಜಮೀನು, ಬೆಂಗಳೂರಿನಲ್ಲಿ 3.01 ಕೋಟಿ ರೂ. ಮೌಲ್ಯದ ವಸತಿ ಕಟ್ಟಡ ಹೊಂದಿದ್ದು, ಒಟ್ಟು 67.24 ಕೋಟಿ ರೂ. ಸಾಲ ಹೊಂದಿರುವುದಾಗಿ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಚರಾಸ್ತಿ ಎಷ್ಟಿದೆ?

4.8 ಕೆ.ಜಿ. ಚಿನ್ನಾಭರಣ ಹಾಗೂ 1.10 ಕೋಟಿ ರೂ. ಮೌಲ್ಯದ ವಾಚ್‌ ಸೇರಿದಂತೆ ದುಬಾರಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಕೈಯಲ್ಲಿ 19.53 ಲಕ್ಷ ರೂ. ನಗದು, ಬ್ಯಾಂಕ್‌ಗಳಲ್ಲಿ16.87 ಕೋಟಿ ರೂ. ಠೇವಣಿ, 17.61 ಕೋಟಿ ರೂ.. ಹೂಡಿಕೆ, 58.10 ಕೋಟಿ ರೂ. ವೈಯಕ್ತಿಕ ಸಾಲ ಮಾಡಿದ್ದಾರೆ.

Share This Article
Leave a comment