ಕರ್ನಾಟಕ ಹೈಕೋರ್ಟ್ ಕಾರ್ಯನಿರ್ವಹಣೆ ಪ್ರಸ್ತಾಪಿಸಿದ ಸುಪ್ರೀಂ ನ್ಯಾ. ಓಕಾ

Team Newsnap
1 Min Read

ಬಾಕಿ ಇರುವ ಅರ್ಜಿಗಳ ತ್ವರಿತ ವಿಲೇವಾರಿಗೆ 11 ಶನಿವಾರಗಳಂದೂ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸಿದರು. ಈ ರೀತಿಯ ಕೆಲಸ ಎಲ್ಲ ನ್ಯಾಯಾಲಯಗಳಲ್ಲೂ ಆಗಬೇಕು ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಹೇಳಿದರು.


ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಠಾಣೆ ಜಿಲ್ಲಾ ನ್ಯಾಯಾಲಯಗಳ ವಕೀಲರ ಸಂಘವು ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ನ್ಯಾಯಮೂರ್ತಿ ಓಕಾ ಮಾತನಾಡಿದರು. ಕೋವಿಡ್ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ಕೆಲಸ ಮಾಡಿದ ರೀತಿಯನ್ನು ಈ ಸಂದರ್ಭದಲ್ಲಿ ಹೇಳಿದರು.


ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕವಾಗುವುದಕ್ಕೂ ಮುನ್ನ ನ್ಯಾ. ಓಕಾ ಅವರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದರು.


ಕೋವಿಡ್ ಪಿಡುಗಿನ ಕಾರಣದಿಂದ ಸಾಕಷ್ಟು ಸಂಖ್ಯೆಯ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ. ಅವುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವುದೂ ಮುಖ್ಯ ಎಂದು ಅವರು ನುಡಿದರು.


ನ್ಯಾಯಾಂಗ ವ್ಯವಸ್ಥೆಯು ಈಗಿನ ಸಂದರ್ಭದಲ್ಲಿ ವಿಶ್ವಾಸಾರ್ಹತೆಯ ಕೊರತೆ ಎಂಬ ಸವಾಲನ್ನೂ ಎದುರಿಸುತ್ತಿದೆ ಎಂದು ನ್ಯಾ. ಓಕಾ ಅಭಿಪ್ರಾಯಪಟ್ಟರು.

Share This Article
Leave a comment