ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಆರೋಪಿ ಮೌಲ್ವಿ ವಾಸೀಂ ಪಠಾಣ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಾನು ನಿರಪರಾಧಿ. ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಅಂತ ವಿಡಿಯೋ ಮಾಡಿ ಬಿಡುಗಡೆ ಮಾಡಿದ ನಾಲ್ಕೇ ಗಂಟೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿಯ ಇಂಡಿಪಂಪ್ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ.
ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತೆ 11 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಪ್ರಕರಣ ಮಾಸ್ಟರ್ ಮೈಂಡ್ ಎಂದೇ ಕರೆಯಲಾಗಿರುವ ಘಟನೆಯ ಪ್ರಮುಖ ರುವಾರಿ ಮೌಲ್ವಿ ವಾಸೀಂ ಪಠಾಣ್ ತಲೆ ಮರೆಸಿಕೊಂಡಿದ್ದ.
ಕೇವಲ ನಾಲ್ಕು ಗಂಟೆ ಹಿಂದೆ ಈತನ ವಿಡಿಯೋವೊಂದು ಬಿಡುಗಡೆ ಮಾಡಿ, ಅಂದು ತಾನು ಗಲಭೆ ನಡೆದ ಸ್ಥಳಕ್ಕೆ ಏಕೆ ಹೋಗಿದ್ದೆ ಎಂಬುದನ್ನು ಆರೋಪಿ ತಿಳಿಸಿದ್ದ. ಈ ವಿಡಿಯೋ ಬಿಡುಗಡೆಯಾಗುತ್ತಿದ್ದಂತೆಯೇ ಅಲರ್ಟ್ ಆದ ಪೊಲೀಸರು, ಆತನನ್ನು ವಶಕ್ಕೆ ಪಡೆದಿದ್ದಾರೆ.
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು