Karnataka

ಸಿಎಂ ತವರಿನ ಋಣ ತೀರಿಸಲು ಮೈಸೂರಿಗೆ ಬಜೆಟ್ ನಲ್ಲಿ ಭಾರಿ ಕೊಡುಗೆ : ಚಿತ್ರನಗರಿ ನಿರ್ಮಾಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಮೈಸೂರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.

ಶುಕ್ರವಾರ ಬಜೆಟ್‌ ಮಂಡಿಸಿದ ಸಿಎಂ, ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು ವಿಶೇಷ ಮಾನ್ಯತೆ ಪಡೆದಿವೆ.

ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರ್ಯಾಂಡಿಂಗ್‌ ಉತ್ತೇಜಿಸಲು ನೂತನ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಘೋಷಣೆ ಮಾಡಿದ್ದಾರೆ.

ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಮೈಸೂರಿಗೆ ಏನೇನು ಕೊಡುಗೆ?

  • ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮಗಳ ಆಯೋಜನೆ.
  • ಮೈಸೂರಿನ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣವನ್ನು ಮೇಲ್ದರ್ಜೆಗೇರಿಸಲು ಕ್ರಮ.
  • ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ʻಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿʼ ನಿರ್ಮಾಣ.
  • ಮಾನವ – ವನ್ಯಪ್ರಾಣಿ ಸಂಘರ್ಷದಲ್ಲಿ ಸಂರಕ್ಷಿಸಿದ, ಗಾಯಗೊಂಡ ಅನಾರೋಗ್ಯಪೀಡಿತ ಪ್ರಾಣಿಗಳ ರಕ್ಷಣೆ/ನಿರ್ವಹಣೆಗಾಗಿ ಬನ್ನೇರುಘಟ್ಟ ಮತ್ತು ಮೈಸೂರಿನಲ್ಲಿರುವ ಪುನರ್ವಸತಿ ಕೇಂದ್ರಗಳ ಸಾಮರ್ಥ್ಯ ವರ್ಧನೆ ಹಾಗೂ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಕೇಂದ್ರಗಳ ನಿರ್ಮಾಣ. ಎಣ್ಣೆ ಮತ್ತಷ್ಟು ದುಬಾರಿ ಎಷ್ಟು ಸುಂಕ ? ಎಷ್ಟು ಏರಿಕೆ ? ರೈತರಿಗೆ ಸಾಲದ ಮಿತಿ ಏರಿಕೆ
  • ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮ.
  • ಮೈಸೂರು ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ನಿರ್ಮಾಣ.
Team Newsnap
Leave a Comment

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024