ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಕಾಂಗ್ರೆಸ್ನ ರಕ್ಷಾ ರಾಮಯ್ಯ ಎದುರು 95,863 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಡಾ.ಕೆ. ಸುಧಾಕರ್ 4,99,570 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದು , ಕಾಂಗ್ರೆಸ್ನ ರಕ್ಷಾ ರಾಮಯ್ಯ 4,03,707 ಮತಗಳನ್ನು ಪಡೆಯಲಷ್ಟೇ ಶಕ್ತರಾದರು. ಈ ಮೂಲಕ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಎರಡನೇ ಗೆಲುವು ಸಿಕ್ಕಿದೆ.
ಇದನ್ನು ಓದಿ –ಮಂಡ್ಯದಲ್ಲಿ ಹೆಚ್.ಡಿ ಕುಮಾರಸ್ವಾಮಿ ಭರ್ಜರಿ ಗೆಲುವು
ಸುಧಾಕರ್ ಗೆಲುವಿನ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ನ ಪ್ರದೀಪ್ ಈಶ್ವರ್ಗೆ ಬಿಜೆಪಿ ನಾಯಕರು ಒತ್ತಡ ಹೇರುತ್ತಿದ್ದಾರೆ.
ಚುನಾವಣೆ ಸಮಯದಲ್ಲಿ ಸುಧಾಕರ್ ವಿರುದ್ಧ ಸವಾಲೆಸೆದಿದ್ದ ಪ್ರದೀಪ್ ಈಶ್ವರ್, ಒಂದು ವೋಟ್ ಲೀಡ್ ಬಂದರೂ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.ಮಂಡ್ಯದಲ್ಲಿ ಹೆಚ್.ಡಿ ಕುಮಾರಸ್ವಾಮಿ ಭರ್ಜರಿ ಗೆಲುವು
ಇದೀಗ ಸುಧಾಕರ್ ಅವರು ಗೆಲುವು ಸಾಧಿಸಿದ್ದು, ಇಂದೇ ಪ್ರದೀಪ್ ಈಶ್ವರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ.
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ