ಪತಿ ನಡೆಸಿದ ಹಲ್ಲೆಯಿಂದಾಗಿ ತೀವ್ರಗಾಯಗೊಂಡಿರುವ ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪತಿ, ನಿರ್ಮಾಪಕ ಸ್ಯಾಮ್ ಬಾಂಬೆ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿ ನಟಿ ಜೈಲಿಗಟ್ಟಿದ್ದರು. ಇದೀಗ ಜೈಲಿನಿಂದ ಹೊರಬರುತ್ತಿದ್ದಂತೆಯೇ ಪೂನಂ ಮೇಲೆ ಸ್ಯಾಮ್ ಮತ್ತೆ ಹಲ್ಲೆ ಮಾಡಿದ್ದಾರೆ.
ಪತಿ ಸ್ಯಾಮ್ ಜೈಲಿನಿಂದ ಹೊರಬರುತ್ತಿದ್ದಂತೆಯೇ ನನ್ನ ಮೇಲೆ ಮತ್ತೆ ಹಲ್ಲೆ ಮಾಡಿದ್ದಾರೆ ಎಂದು ಪೂನಂ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸ್ಯಾಮ್ ನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇತ್ತ ಹಲ್ಲೆಯಿಂದ ಮುಖ, ಕಣ್ಣು ಹಾಗೂ ತಲೆಗೆ ಗಾಯಗೊಂಡಿರುವ ಪೂನಂ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ