ಪೇಂಟಿಂಗ್ ಕೆಲಸ ಮಾಡುತ್ತಿದ್ದ ಮೈಕಲ್ ಫ್ರಾನ್ಸಿಸ್(30) ತನ್ನ 28 ವಯಸ್ಸಿನ ಪತ್ನಿಯನ್ನು ಕೊಲೆ ಮಾಡಿದ್ದಾನೆ.
ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಇಬ್ಬರು ಮಕ್ಕಳಿದ್ದು ,ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆರು ತಿಂಗಳ ಹಿಂದೆ ಪತಿಯನ್ನು ತೊರೆದು ಕೋರಮಂಗಲದ ವೆಂಕಟಪುರದಲ್ಲಿರುವ ತವರು ಮನೆಯಲ್ಲಿ ಇಂದು ನೆಲೆಸಿದ್ದರು.
ಮೈಕಲ್ ಫ್ರಾನ್ಸಿಸ್ ನಡತೆ ಶಂಕಿಸಿ ಹಲ್ಲೆ ಮಾಡುತ್ತಿದ್ದರಿಂದ ನೊಂದ ಪತ್ನಿ ತವರಿಗೆ ಹೋಗಿದ್ದಳು.
ಪತ್ನಿ ಕೆಲಸ ಮಾಡುವ ಜಾಗಕ್ಕೆ ಹೋಗಿ ಫ್ಯಾನ್ಸಿಸ್ ಗಲಾಟೆ ಮಾಡುತ್ತಿದ್ದ ಕಾರಣ ಕೋರಮಂಗಲ ಠಾಣೆಗೆ ತೆರಳಿ ಪತಿ ವಿರುದ್ಧ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಗೆ ಕರೆ ಮಾಡಿ ಠಾಣೆಗೆ ಬರುವಂತೆ ತಿಳಿಸಿದ್ದಾರೆ.
ಪೊಲೀಸ್ ಠಾಣೆಯಿಂದ ದೂರು ನೀಡಿ ಹೊರ ಬರುತ್ತಿದ್ದ ಪತ್ನಿಯನ್ನು ಚಾಕುವಿನಿಂದ ಇರಿದು ಮೈಕಲ್ ಫ್ರಾನ್ಸಿಸ್ ಪರಾರಿಯಾಗಿದ್ದಾನೆ.
ಪತ್ನಿಯನ್ನು ಆಸ್ಪತ್ರೆಗೆ ಸಾಗಿಸವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು