December 24, 2024

Newsnap Kannada

The World at your finger tips!

sunil bose

ನಾನು ತಿ.ನರಸೀಪುರ ಕ್ಷೇತ್ರದ ಪ್ರಬಲ ಆಕಾಂಕ್ಷಿ: ಕಾಂಗ್ರೆಸ್ ಮುಖಂಡ ಬೋಸ್

Spread the love

ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಅವರ ಪುತ್ರ, ಕಾಂಗ್ರೆಸ್ ಮುಖಂಡ ಸುನೀಲ್ ಬೋಸ್ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಿ.ನರಸೀಪುರ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ‌.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಿ.ನರಸೀಪುರ ಕ್ಷೇತ್ರದಲ್ಲೇ ನಾನು ಸ್ಪರ್ಧಿಸಲು ಪ್ರಬಲ ಆಕಾಂಕ್ಷೆಯಾಗಿದ್ದೇನೆ. ಹಾಗಾಗಿ ಕ್ಷೇತ್ರದಲ್ಲಿ ಪಕ್ಷ ಸಂಘಟಿಸುವ ಕಾರ್ಯದಲ್ಲಿ ನಿರತನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ತಂದೆಯವರ ಅನುಪಸ್ಥಿತಿಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಾನು ಮುಂದಾಳತ್ವ ವಹಿಸಿದ್ದು, ಜನ ನನ್ನ ನಾಯಕತ್ವಕ್ಕೆ ಬೆಂಬಲ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹೈಕಾಮೆಂಡ್ ತೀರ್ಮಾನಕ್ಕೂ ಬದ್ದನಿದ್ದೇನೆ ಎಂದು ತಿಳಿಸಿದರು.

Copyright © All rights reserved Newsnap | Newsever by AF themes.
error: Content is protected !!