ಈ ಯಡಿಯೂರಪ್ಪನ ಮೇಲೆ ಹೈಕಮಾಂಡ್ ವಿಶ್ವಾಸವಿಟ್ಟಿದೆ. ಎಷ್ಟು ದಿನ ಇದೇ ವಿಶ್ವಾಸ ಇಟ್ಟು ಮುಂದುವರೆಯಿರಿ ಅಂತಾರೋ ಅಲ್ಲಿಯವರೆಗೂ ಇರುತ್ತೇನೆ. ಯಾವಾಗ ರಾಜೀನಾಮೆ ಕೊಡಿ ಅಂತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ.
ರಾಜ್ಯ ನಾಯಕತ್ವ ಮತ್ತು ಮುಖ್ಯಮಂತ್ರಿ ರಾಜೀನಾಮೆ ಕುರಿತು ಸಿಎಂ ಯಡಿಯೂರಪ್ಪನವರು ಸ್ಪಷ್ಟವಾಗಿ ಹೇಳಿದ ಮಾತುಗಳಿವು.
ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ಪರ್ಯಾಯ ನಾಯಕ ಇಲ್ಲವೆಂಬ ಮಾತುಗಳಿಗೆ ಉತ್ತರಿಸಿದ ಅವರು, ಪರ್ಯಾಯ ನಾಯಕತ್ವ ಇಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ. ದೇಶದಲ್ಲಿ ಪರ್ಯಾಯ ನಾಯಕರು ಇದ್ದೇ ಇದ್ದಾರೆ. ಆಯಾಯ ಕಾಲಕ್ಕೆ ತಕ್ಕಂತೆ ಪರ್ಯಾಯ ನಾಯಕರು ಸಿಗುತ್ತಾರೆ. ರಾಜ್ಯದಲ್ಲೂ ಪರ್ಯಾಯ ನಾಯಕರು ಇಲ್ಲ ಅಂತಾ ಏನಿಲ್ಲ ಎಂದರು.
ಸಚಿವ ಸಿ.ಪಿ ಯೋಗೇಶ್ವರ್ ಸೇರಿದಂತೆ ಹಲವರು ತಮ್ಮ ವಿರುದ್ಧ ಬಹಿರಂಗ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಯಡಿಯೂರಪ್ಪ, ನಾನು ಯಾರ ಬಗ್ಗೆಯೂ ಟೀಕೆ ಮಾತನ್ನಾಡುವುದಿಲ್ಲ. ರಾಜೀನಾಮೆ ಕೊಡಿ ಅಂದಾಕ್ಷಣ ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿ ಕೆಲಸ ಮಾಡುತ್ತೇನೆ. ನಾನು ಈಗ ಯಾವುದೇ ಗೊಂದಲದಲ್ಲಿ ಇಲ್ಲ. ಹೈಕಮಾಂಡ್ ನನಗೆ ಒಂದು ಅವಕಾಶ ಕೊಟ್ಟಿದೆ. ಅದನ್ನು ಸದುಪಯೋಗಪಡಿಸಿಕೊಳ್ತೇನೆ ಎಂದು ತಿಳಿಸಿದರು.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ