ಕೊಲೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಗೃಹಸಚಿವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದರು.
ಈ ಕುರಿತಂತೆ ಸುದ್ದಿಗಾರರ ಜೊತೆ ಮಾತನಾಡಿದ ವಿಶ್ವನಾಥ
ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತೇವೆ. ಈ ಮೂಲಕ ಕೊಲೆ ಸಂಚಿನ ಹಿಂದೆ ಇರುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು
ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆಯನ್ನು ಕೈಗೊಂಡಿದ್ದಾರೆ ಎಲ್ಲರಿಗೂ ನೋಟಿಸ್ ನೀಡುತ್ತಾರೆ. ನನಗೆ ನೋಟಿಸ್ ಬಂದಾಗ ನಾನು ತನಿಖೆಗೆ ಸಹಕರಿಸುವೆ ಎಂದರು.
ದೂರಿನಲ್ಲಿ ಗೋಪಾಲಕೃಷ್ಣ ಹೆಸರನ್ನೊಂದೇ ಉಲ್ಲೇಖಿಸಿದ ಕುರಿತು ಮಾತನಾಡಿದ ಅವರು, ಕುಳ್ಳ ದೇವರಾಜು ಆಗಲಿ, ಗೋಪಾಲಕೃಷ್ಣ ಆಗಲಿ ಯಾರನ್ನು ಕ್ಷಮಿಸುವುದಿಲ್ಲ. ತಪ್ಪು ಮಾಡಿದವರನ್ನು ನಾನು ಎಂದಿಗೂ ಕ್ಷಮಿಸುವುದಿಲ್ಲ. ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಹಾಗೆ ಮಾಡುತ್ತೇನೆ. ಈ ಪ್ರಕರಣದಲ್ಲಿ ಇನ್ನು ಯಾರು ಶಾಮೀಲಾಗಿದ್ದಾರೆ ಎನ್ನುವುದು ಕೆಲವೇ ದಿನಗಳಲ್ಲಿ ತಿಳಿಯುತ್ತದೆ. ತನಿಖೆಯಿಂದಾಗಿ ಸಂಪೂರ್ಣ ಮಾಹಿತಿಯೂ ಬಹಿರಂಗವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಇಂದು ಚರ್ಚೆ ನಡೆಸಲಿದ್ದೇನೆ ಎಂದರು.
More Stories
BBMP ಗೆ 9 ವಾರದೊಳಗೆ ಚುನಾವಣೆ ನಡಸುವಂತೆ ಸುಪ್ರೀಂ ಆದೇಶ
ರಾತ್ರಿ ರಹಸ್ಯ ಸಭೆ ನಡೆಸಿ ಇಂದು ದಿಢೀರ್ ದೆಹಲಿಗೆ ಹೊರಟ ಸಿಎಂ
ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರಸ್ತೆ ಅಪಘಾತ- ಇಬ್ಬರು ಯುವಕರ ಸಾವು