Trending

ನಾನು ಆರೋಗ್ಯವಾಗಿದ್ದೇನೆ :ಹಾಸ್ಯ ನಟ, ಮಂಡ್ಯದ ಚಿಕ್ಕಣ್ಣ ಸ್ಪಷ್ಟನೆ

ಸಾಮಾಜಿಕ ಜಾಲತಾಣದಲ್ಲಿ ಹಾಸ್ಯ ನಟ ಚಿಕ್ಕಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ

ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ತಿಳಿದ ಕೆಲವರು ಚಿಕ್ಕಣ್ಣಗೆ ಕಾಲ್ ಮಾಡಿ ಆರೋಗ್ಯ ವಿಚಾರಿಸಿಕೊಂಡರು. ಇದೀಗ ಆ ಕುರಿತು ಸ್ವತಃ ಚಿಕ್ಕಣ್ಣ ಅವರೇ ಸ್ಪಷ್ಟನೆ ನೀಡಿದ್ದಾರೆ.ಇದನ್ನು ಓದಿ – ಅಂಗಡಿ-ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಕಡ್ಡಾಯ – ತಪ್ಪಿದರೆ ಅಂಗಡಿ ಲೈಸನ್ಸ್ ರದ್ದು

ಸದ್ಯ ಚಿಕ್ಕಣ್ಣ ಉಪಾಧ್ಯಕ್ಷ ಸಿನಿಮಾದ ಶೂಟಿಂಗ್ ನಲ್ಲಿದ್ದಾರೆ. ಚಿತ್ರೀಕರಣ ಸ್ಥಳದಿಂದಲೇ ವಿಡಿಯೋವೊಂದನ್ನು ಕಳುಹಿಸಿರುವ ಅವರು, “ಸಾಮಾಜಿಕ ಜಾಲತಾಣದಲ್ಲಿ ಹರಡಿರುವ ಸುದ್ದಿ ಸುಳ್ಳು. ಯಾರೋ ಕಿಡಿಗೇಡಿಗಳು ಆ ರೀತಿ ಮಾಡಿದ್ದಾರೆ. ನಾನು ಉಪಾಧ್ಯಕ್ಷ ಸಿನಿಮಾದ ಶೂಟಿಂಗ್ ನಲ್ಲಿದ್ದೇನೆ. ಅದೇ ಸ್ಥಳದಿಂದಲೇ ಈಗ ಮಾತನಾಡುತ್ತಿದ್ದೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಆರೋಗ್ಯ ಗಟ್ಟಿಮುಟ್ಟಾಗಿದ್ದು, ನಿಮ್ಮೆಲ್ಲರ ಆಶೀರ್ವಾದದಿಂದ ಚೆನ್ನಾಗಿದ್ದೇನೆ ಎಂದಿದ್ದಾರೆ. ಚಿಕ್ಕಣ್ಣ ಅವರ ವಿಷಯದಲ್ಲಿ ಆಗಾಗ್ಗೆ ಈ ರೀತಿ ಸುಳ್ಳು ಸುದ್ದಿಗಳು ಹರಡುತ್ತಲೇ ಇರುತ್ತವೆ. ಈ ಹಿಂದೆ ನಿರೂಪಕಿಯೊಬ್ಬರನ್ನು ಚಿಕ್ಕಣ್ಣ ಮದುವೆ ಆಗಿದ್ದಾರೆ ಎಂದು ಗಾಸಿಪ್ ಹರಡಿಸಿದ್ದರು.ಇಂದು ಅವರ ಆರೋಗ್ಯದ ಕುರಿತು ಸುಳ್ಳು ಸುದ್ದಿ ಹರಡಿದೆ.

Team Newsnap
Leave a Comment

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024