ನನ್ನ ಆರೋಗ್ಯ ಉತ್ತಮವಾಗಿದೆ ಪಕ್ಷದ ಚಟುವಟಿಕೆಗಳಲ್ಲಿ ನಾನು ಸಧ್ಯದಲ್ಲೇ ಸಕ್ರಿಯವಾಗುತ್ತೇನೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಮಂತ್ರಿಗಳು ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾಗಿರುವ ಕಾರಣಕ್ಕೆ ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದ್ದರು. ಕೆಲ ದಿನ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆದಿದ್ದೇನೆ ಎಂದು ಅವರು ಹೇಳಿದ್ದಾರೆ. ಇದನ್ನು ಓದಿ : ಪಿಎಂ ಕೇರ್ಸ್ ಫಂಡ್: ರತನ್ ಟಾಟಾ ಟ್ರಸ್ಟಿ, ಸಲಹೆಗಾರರಾಗಿ ಸುಧಾಮೂರ್ತಿ ನೇಮಕ
ನನ್ನೆಲ್ಲಾ ರಾಜಕೀಯ, ಸಂಸದೀಯ ಹಾಗೂ ಪಕ್ಷದ ಜವಾಬ್ದಾರಿಗಳನ್ನು ಮನೆಯಿಂದಲೇ ನಿರ್ವಹಣೆ ಮಾಡಲಿದ್ದೇನೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲವು ದಿನಗಳ ಮಟ್ಟಿಗೆ ನನ್ನ ಭೇಟಿಗೆ ಬರುವುದು ಬೇಡ ಎಂದಿದ್ದಾರೆ.
More Stories
ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಕಮೀಷನರ್ ನೇಮಕ
ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ