December 22, 2024

Newsnap Kannada

The World at your finger tips!

rahul , politics , india

ನಾನು ಸಾವರ್ಕರ್ ಅಲ್ಲ, ಕ್ಷಮೆ ಕೇಳುವುದಿಲ್ಲ: ರಾಹುಲ್ ಮೊದಲ ಪ್ರತಿಕ್ರಿಯೆ

Spread the love

ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ. ನಾನು ಕ್ಷಮೆ ಕೇಳುವುದಿಲ್ಲ ಎಂದು ಬಿಜೆಪಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗೇಟು ನೀಡಿದರು.

ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ವಿಚಾರಕ್ಕೆ ಸಂಬಂಧಿಸಿದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು.

ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಅವರು ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ಪ್ರಧಾನಿ ಮೋದಿ ಅವರ ಕಣ್ಣುಗಳಲ್ಲಿ ನಾನು ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಲು ಅವರು ಬಯಸುವುದಿಲ್ಲ ಎಂದು ಹೇಳಿದರು.

ದೇಶದ ಆಂತರಿಕ ವ್ಯವಹಾರಗಳಲ್ಲಿ ಅಂತಾರಾಷ್ಟ್ರೀಯ ಶಕ್ತಿಗಳ ಹಸ್ತಕ್ಷೇಪವನ್ನು ರಾಹುಲ್‌ ಗಾಂಧಿ ಬಯಸಿದ್ದರು ಎಂಬ ಬಿಜೆಪಿಯ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ

ಲಂಡನ್‌ನಲ್ಲಿ ನೀಡಿದ ಹೇಳಿಕೆಗಳ ಮೇಲಿನ ಆರೋಪಗಳಿಗೆ ಸದನದಲ್ಲಿ ಪ್ರತಿಕ್ರಿಯಿಸಲು ಅವಕಾಶ ನೀಡುವಂತೆ ಸ್ಪೀಕರ್ ಅವರನ್ನು ಕೇಳಿದ್ದೇನೆ ಎಂದು ತಿಳಿಸಿದರು.

ನನಗೆ ಒಂದೇ ಒಂದು ಹೆಜ್ಜೆ ಇದೆ. ಅದು ಸತ್ಯಕ್ಕಾಗಿ ಹೋರಾಡುವುದಾಗಿದೆ. ಈ ದೇಶದ ಪ್ರಜಾಪ್ರಭುತ್ವದ ಸ್ವರೂಪವನ್ನು ರಕ್ಷಿಸುವುದು. ಅದಕ್ಕಾಗಿ ನನ್ನನ್ನು ಜೀವನಪರ್ಯಂತ ಅನರ್ಹಗೊಳಿಸಿ, ಜೈಲಿಗೆ ಹೋಗಲು ನಾನು ಸಿದ್ಧ ಎಂದರು.ಇದನ್ನು ಓದಿ –ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ 

Copyright © All rights reserved Newsnap | Newsever by AF themes.
error: Content is protected !!