ನನಗೆ ಸಿಎಂ ಆಗೋ ಅರ್ಹತೆ ಇದೆ – ಸಚಿವ ಉಮೇಶ್ ಕತ್ತಿ

Team Newsnap
1 Min Read

ನನ್ನಲ್ಲಿ ಸಿಎಂ ಆಗುವ ಎಲ್ಲಾ ಅರ್ಹತೆಯಿದೆ. ಹಣೆ ಬರಹದಲ್ಲಿ ಬರೆದಿದ್ದರೆ ನಾನೂ ಸಿಎಂ ಆಗ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಮೈಸೂರಿನಲ್ಲಿ ಗುರುವಾರ ಪ್ರತ್ಯೇಕ ರಾಜ್ಯದ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕತ್ತಿ ಅವರು, ಅಭಿವೃದ್ಧಿ ದೃಷ್ಟಿಯಿಂದ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇನೆ ಹೊರತು ಬೇರೆ ಉದ್ದೇಶ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. 

ಈಗಿರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಸಿಎಂ ಆಗಿವ ಎಲ್ಲಾ ಅರ್ಹತೆ ಇದೆ. ನಾನು ಸಿಎಂ ಆಗಬೇಕಾದರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ. ಆದರೆ ಸಿಎಂ ಸ್ಥಾನಕ್ಕಾಗಿ ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ. ಪ್ರತ್ಯೇಕ ರಾಜ್ಯವಾದರೂ ನಾವು ಕನ್ನಡಿಗರೇ, ಆಂಧ್ರ, ತೆಲಂಗಾಣ ರೀತಿಯಲ್ಲೇ ನಮ್ಮದೂ ಪ್ರತ್ಯೇಕವಾಗಲಿ ಎಂದು ಬಯಸಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮ ಜನರ ದೃಷ್ಟಿಯಿಂದ ನಾನೇ ಹಿರಿಯನಾಗಿ ಧ್ವನಿ ಎತ್ತಿದ್ದೇನೆ. ಹೈಕಮಾಂಡ್ ಮಟ್ಟದಲ್ಲೂ ಹೊಸ ರಾಜ್ಯಗಳ ರಚನೆ ಬಗ್ಗೆ ಚಿಂತನೆ ನಡೆದಿದೆ ಎಂಬುದು ನನ್ನ ಅನಿಸಿಕೆ. ನಾನು ಮಾತನಾಡಿದರೆ ಆ ವಿಚಾರ ಕೇಂದ್ರದ ಮಟ್ಟಕ್ಕೂ ಹೋಗುತ್ತದೆ. ಆದ್ದರಿಂದಲೇ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಟೈಲರ್ ಕನ್ಹಯ್ಯ ಹತ್ಯೆ ಪ್ರಕರಣ ಖಂಡಿಸಿ ಸರ್ಕಾರವನ್ನು ಎಚ್ಚರಿಸಿದ ಪೇಜಾವರ ಶ್ರೀಗಳು

ಸ್ವಪಕ್ಷೀಯ ಸರ್ಕಾರದ ಆಡಳಿತವನ್ನೇ ಪ್ರಶ್ನಿಸಿದ ಉಮೇಶ್ ಕತ್ತಿ, ದೊಡ್ಡ ರಾಜ್ಯಗಳಾದಾಗ ಇಂತಹ ಸಮಸ್ಯೆಗಳು ಇದ್ದೇ ಇರುತ್ತವೆ. ಇದೇ ಕಾರಣಕ್ಕೆ ನಾವು ರಾಜ್ಯ ಇಬ್ಬಾಗ ಆಗಬೇಕೆಂದು ಕೇಳುತ್ತಿದ್ದೇನೆ. ಜಲಾಶಯಗಳ ನೀರಿನ ಬಳಕೆ, ಗಡಿ ಸಮಸ್ಯೆಗಳ ನಿವಾರಣೆ ಇದರ ದೃಷ್ಟಿಯಿಂದ ಚಿಕ್ಕ ರಾಜ್ಯಗಳು ಆಗಬೇಕು. ಅತಿ ಹೆಚ್ಚು ಜನಸಂಖ್ಯೆ ಇದ್ದಾಗ ಯಾವ ಸಮಸ್ಯೆಗಳೂ ಬಗೆಹರಿಯುವುದಿಲ್ಲ ಎಂದು ಕುಟುಕಿದ್ದಾರೆ.

Share This Article
Leave a comment