ರಾಮನಗರ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ , ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ , ನಾನು ಸ್ಪರ್ಧಿಸುವಂತೆ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಇಂದು ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿ ಅಯ್ಕೆ ವಿಚಾರದ ಬಗ್ಗೆ ಕಳೆದ ವಾರ ನಾನು ಕುಮಾರಸ್ವಾಮಿ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ, ಆದಷ್ಟು ಬೇಗ ಅಭ್ಯರ್ಥಿ ಹೆಸರು ಸೂಚಿಸುವಂತೆ ಕೇಳಿದ್ದೇನೆ ಎಂದರು.
ಕುಮಾರಸ್ವಾಮಿ (HD Kumaraswamy) ಅವರಿಗೆ ನಾನು ಈ ಬಗ್ಗೆ ಮನವಿ ಮಾಡಿದ್ದೇನೆ. ಅದಕ್ಕೆ ಅವರೂ ಕೂಡಾ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ತಾಲೂಕಿನ ಜನರ ಆತಂಕ, ಒತ್ತಡ ಹೆಚ್ಚಾಗುತ್ತಿದೆ.
ನಮ್ಮ ಕಾರ್ಯಕರ್ತರು, ಮುಖಂಡರು ಒತ್ತಡ ಹೇರುತ್ತಿದ್ದು ,ಗೊಂದಲಕ್ಕೆ ಅವಕಾಶ ಕೊಡದೇ ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ ಆಗಬೇಕು .KRS ಅಣೆಕಟ್ಟು ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ
HDK ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತಾರೆ ಎಂದು ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು