ತೀವ್ರ ಕುತೂಹಲ ಕೆರಳಿಸಿರುವ ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಗೊಂದಲ ಇರುವಾಗಲೇ ನಾನೇ ಅಭ್ಯರ್ಥಿ ಎಂದು ಜಿ.ಪಂ.ಮಾಜಿ ಸದಸ್ಯೆ ಭವಾನಿ ರೇವಣ್ಣ ಹೇಳಿಕೊಂಡಿದ್ದಾರೆ.
ಹಾಸನ ತಾಲೂಕಿನ ಸಾಲಗಾಮೆ ಹೋಬಳಿ ಕಕ್ಕೇಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಣ್ಣಪ್ಪ ಸ್ವಾಮಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಜೆಡಿಎಸ್‌ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ಪಲ್ಪ ದಿನಗಳಲ್ಲೇ ನನ್ನ ಹೆಸರು ಘೋಷಣೆಯಾಗಲಿದೆ ಎಂದಿದ್ದಾರೆ.
ಜನರ ಪರಿಚಯ ಇದ್ದರೆ, ಊರಿನ ಪರಿಚಯ ಆಗುತ್ತದೆ. ಮುಂದಿನ ದಿನಗಳಲ್ಲಿ ಕೆಲಸ ಮಾಡಲು ನನಗೂ ಒಳ್ಳೆಯದು, ಅನುಕೂಲ ಆಗಲಿದೆ. ಅದಕ್ಕಾಗಿ ಕ್ಷೇತ್ರ ಪ್ರವಾಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಕೆಲಸ ಮಾಡಲು, ಭಗವಂತ ನನಗೆ ಆಶೀರ್ವಾದ ಮಾಡಲಿ ಎಂದು ಬೇಡುವೆ. ಮತ್ತೊಮ್ಮೆ ಈ ಊರಿಗೆ ಬರುವೆ, ನಿಮ್ಮನ್ನು ಮತ್ತೆ ಭೇಟಿ ಮಾಡುವೆ ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕರ್ನಾಟಕದ ಬಜೆಟ್ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್
ಮುಡಾ ಹಗರಣ: ದಾಖಲೆ ಒದಗಿಸಿದವರಲ್ಲಿ ಕಾಂಗ್ರೆಸ್ ನಾಯಕರು ಸಹ ಇದ್ದರು – ಸ್ನೇಹಮಯಿ ಕೃಷ್ಣಾ