ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡುವೆ : ಮುಸ್ಕಾನ್‌ ತಂದೆ ಅಹಮ್ಮದ್

Team Newsnap
1 Min Read

ಅನೇಕರು ಬಂದು ನನ್ನ ಮಗಳಿಗೆ ಹಣ, ಉಡುಗೊರೆ ಕೊಟ್ಟಿದ್ದಾರೆ. ಅದನ್ನು ನಾನು ಜನರ ಸೇವೆಗಾಗಿ ನೀಡುತ್ತೇನೆಂದು ಅಲ್ಲಾಹು ಅಕ್ಬರ್‌ ಎಂದು ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್‌ ತಂದೆ ಮಹಮ್ಮದ್‌ ಹುಸೇನ್‌ ಖಾನ್‌ ತಿಳಿಸಿದ್ದಾರೆ.

ಹಣ, ಉಡುಗೊರೆ ಕೊಡಲು ಬಂದವರಿಗೆ ಬೇಡ ಎಂದಿದ್ದೆವು. ಆದರೂ ಅವರು ನೀಡಿದ್ದಾರೆ. ಆ ಹಣದಲ್ಲಿ ಜನರ ಸೇವೆಗಾಗಿ ಆಂಬುಲೆನ್ಸ್‌ ಕೊಡುತ್ತೇನೆ. ದೇವರು ನಮ್ಮನ್ನು ಚೆನ್ನಾಗಿ ಇಟ್ಟಿದ್ದಾನೆ. ಅವರು ಕೊಟ್ಟ ದುಡ್ಡನ್ನು ಜನಸೇವೆಗೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಅಲ್‌‌ಖೈದಾ ಉಗ್ರ ಸಂಘಟನೆ ಮುಖ್ಯಸ್ಥನಿಂದ ಮುಸ್ಕಾನ್ ಹೊಗಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,
ಅವರು ಯಾರು ಅನ್ನುವುದು ನನಗೆ ಗೊತ್ತಿಲ್ಲ. ಮಾಧ್ಯಮಗಳ ಮುಖಾಂತರ ಈ ವಿಚಾರ ತಿಳಿಯಿತು. ಅರಬ್ಬಿ ಭಾಷೆಯಲ್ಲಿ ಮಗಳನ್ನು ಹೊಗಳಿದ್ದಾರೆ. ಆದರೆ ಅವರ ಬಗ್ಗೆ ನನಗೇನೂ ಗೊತ್ತಿಲ್ಲ. ಇದೆಲ್ಲಾ ತಪ್ಪು, ಗೊಂದಲ ಮಾಡಿ ನಮ್ಮ ನಮ್ಮಲ್ಲಿ ಜಗಳ ತಂದಿಡಲು ಮಾಡ್ತಿದ್ದಾರೆ. ಈ ರೀತಿಯ ಹೊಗಳಿಗೆ ಬೇಕಾಗಿಲ್ಲ ಎಂದರು.

ಆದರೆ ನನ್ನ ಮಗಳಿಗೆ ಜೀವ ಭಯ ಇದೆ. ಮಗಳ ಜವಾಬ್ದಾರಿ ತೆಗೆದುಕೊಳ್ತೀರಾ ಅಂತ ಕಾಲೇಜಿನವರನ್ನು ಕೇಳಿದೆ. ಅವರು ಆಗಲ್ಲ ಅಂದ್ರು. ಅದಕ್ಕಾಗಿ ಬೇರೆ ಕಾಲೇಜಿಗೆ ದಾಖಲಿಸುತ್ತೇನೆ. ಈ ಘಟನೆ ಬಳಿಕ ಅಲ್ಲಿನ ಸ್ಥಿತಿ ಅರ್ಥ ಆಗಿದೆ‌. ಯಾರ ಹೊಗಳಿಕೆ, ಉಡುಗೊರೆ ನಮಗೆ ಬೇಡ. ನಾವು ಎಲ್ಲರ ಜೊತೆ ಅಣ್ಣ, ತಮ್ಮಂದಿರ ಹಾಗೇ ಇದ್ದೇವೆ. ಕರ್ನಾಟಕದ ಜನ ಯಾರ ಮಾತನ್ನು ನಂಬಬೇಡಿ. ಉಗ್ರ ಸಂಘಟನೆ ಮುಖ್ಯಸ್ಥನ ಹೊಗಳಿಗೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share This Article
Leave a comment