ಕಾಂಗ್ರೆಸ್‌ನಿಂದ ನಾನೂ ಟಿಕೆಟ್ ಕೇಳಿದ್ದೇನಿ – ನಟಿ ಭಾವನಾ

Team Newsnap
1 Min Read

ನಾನೂ ಕೂಡ 2023ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಕೇಳುವೆ . ಜನರ ಸೇವೆಗಾಗಿ ಚುನಾವಣೆಗೆ ನಿಲ್ತೀನಿ ಎಂದು ಕನ್ನಡದ ನಟಿ ಭಾವನಾ ಹೇಳಿದರು.

ಭಾರತ್ ಜೋಡೋ ಯಾತ್ರೆ ವೇಳೆ ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಭಾವನ ,ನಾನು ಈ ಬಾರಿ ಕಾಂಗ್ರೆಸ್‌ನಿಂದ ಟಿಕೆಟ್ ಕೇಳ್ತೀನಿ. ಜನರ ಸೇವೆಗಾಗಿ ನಾನು ಚುನಾವಣೆಗೆ ನಿಲ್ತೀನಿ. ಮುಂದೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಪ್ರಧಾನಿ ಮೋದಿಗೆ ರಾಹುಲ್‌ಗಾಂಧಿ ಸಮನಾದ ವ್ಯಕ್ತಿ ಎಂದರು.

ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ರಾಹುಲ್‌ಗಾಂಧಿ ನೇತೃತ್ವದಲ್ಲಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಅದಕ್ಕಾಗಿ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲೂ ಸೆಪ್ಟೆಂಬರ್ 30 ರಿಂದ ಅ 14ರ ವರೆಗೆ ರಾಹುಲ್ ಗಾಂಧಿ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದರು.

Share This Article
Leave a comment