ಸಚಿವ ಸ್ಥಾನಕ್ಕೆ ನಾನು ಯಾವತ್ತೂ ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ. ಎದೆ ಕೊಟ್ಟು ನಿಲ್ಲುತ್ತೇನೆ. ಮಂತ್ರಿ ಆಗೋದು ಬಿಡೋದು ಬೇರೆ ಪ್ರಶ್ನೆ. ಯಾರದ್ದೋ ಷಡ್ಯಂತ್ರಕ್ಕೆ ಬಲಿ ಆಗುತ್ತಿದ್ದೇವೆ ಎಂದು ಹರಿ ಪ್ರಸಾದ್ ಕಿಡಿಕಾರಿದರು.
ಬೆಂಗಳೂರಿನಲ್ಲಿ ನಡೆದ ಬಿಲ್ಲವ, ಈಡಿಗ ಮುಖಂಡರ ಸಭೆಯಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ನನಗೆ ಸಿಎಂ ಆಯ್ಕೆ ಮಾಡುವುದೂ ಗೊತ್ತು, ಕೆಳಗಿಳಿಸುವುದೂ ಗೊತ್ತು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.2 ತಿಂಗಳ ಹಿಂದೆ ಮದ್ವೆಯಾಗಿದ್ದ ಗೃಹಿಣಿ ಆತ್ಮಹತ್ಯೆ
ಸಿದ್ದರಾಮಯ್ಯ ಹಿಂದುಳಿದ ವರ್ಗಕ್ಕೆ ಸೇರಿದವರು. ಎಲ್ಲರೂ ಒಗ್ಗಟ್ಟಾಗಬೇಕು ಎಂಬ ಕಾರಣಕ್ಕೆ 2013ರಲ್ಲಿ ಬೆಂಬಲ ಕೊಟ್ಟೆದ್ದೆವು. ರಾಜಕೀಯವಾಗಿ ಈಡಿಗ ಸಮಾಜದವರು ಮುಂದೆ ಬರಲಿಲ್ಲ. ಷಡ್ಯಂತ್ರಕ್ಕೆ ನಾವು ಬಲಿಯಾಗುತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು