ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗಿಳಿಸೋದು ಗೊತ್ತು: ಗುಡುಗಿದ ಬಿ.ಕೆ. ಹರಿಪ್ರಸಾದ್

Team Newsnap
1 Min Read
I know how to choose and remove a CM: B.K. Hariprasad ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗಿಳಿಸೋದು ಗೊತ್ತು: ಗುಡುಗಿದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಸಚಿವ ಸ್ಥಾನದಿಂದ ವಂಚಿತರಾದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅಸಮಾಧಾನಗೊಂಡು ಸಿಎಂ ಸಿದ್ದು ವಿರುದ್ದವೇ ಗುಡುಗಿದ್ದಾರೆ.

ಸಚಿವ ಸ್ಥಾನಕ್ಕೆ ನಾನು ಯಾವತ್ತೂ ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ. ಎದೆ ಕೊಟ್ಟು ನಿಲ್ಲುತ್ತೇನೆ. ಮಂತ್ರಿ ಆಗೋದು ಬಿಡೋದು ಬೇರೆ ಪ್ರಶ್ನೆ. ಯಾರದ್ದೋ ಷಡ್ಯಂತ್ರಕ್ಕೆ ಬಲಿ ಆಗುತ್ತಿದ್ದೇವೆ ಎಂದು ಹರಿ ಪ್ರಸಾದ್ ಕಿಡಿಕಾರಿದರು.

ಬೆಂಗಳೂರಿನಲ್ಲಿ ನಡೆದ ಬಿಲ್ಲವ, ಈಡಿಗ ಮುಖಂಡರ ಸಭೆಯಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ನನಗೆ ಸಿಎಂ ಆಯ್ಕೆ ಮಾಡುವುದೂ ಗೊತ್ತು, ಕೆಳಗಿಳಿಸುವುದೂ ಗೊತ್ತು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.2 ತಿಂಗಳ ಹಿಂದೆ ಮದ್ವೆಯಾಗಿದ್ದ ಗೃಹಿಣಿ ಆತ್ಮಹತ್ಯೆ

WhatsApp Image 2023 07 21 at 9.21.33 PM

ಸಿದ್ದರಾಮಯ್ಯ ಹಿಂದುಳಿದ ವರ್ಗಕ್ಕೆ ಸೇರಿದವರು. ಎಲ್ಲರೂ ಒಗ್ಗಟ್ಟಾಗಬೇಕು ಎಂಬ ಕಾರಣಕ್ಕೆ 2013ರಲ್ಲಿ ಬೆಂಬಲ ಕೊಟ್ಟೆದ್ದೆವು. ರಾಜಕೀಯವಾಗಿ ಈಡಿಗ ಸಮಾಜದವರು ಮುಂದೆ ಬರಲಿಲ್ಲ. ಷಡ್ಯಂತ್ರಕ್ಕೆ ನಾವು ಬಲಿಯಾಗುತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Share This Article
Leave a comment