ನಾನು ಪಕ್ಷಕ್ಕಾಗಲಿ, ಅಭ್ಯರ್ಥಿಗಾಗಲಿ ದ್ರೋಹ ಮಾಡುವುದಿಲ್ಲ : ಪ್ರತಾಪ್ ಸಿಂಹ

Team Newsnap
1 Min Read

ಮೈಸೂರು : ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ , ನಾನು ಪಕ್ಷಕ್ಕೂ ದ್ರೋಹ ಮಾಡಲ್ಲ, ಪಕ್ಷದಲ್ಲಿ ಇರುವವರಿಗೂ (ಯದುವೀರ) ದ್ರೋಹ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಿನ್ನೆ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, 2014ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಅಂಥಾ ಹೈಕಮಾಂಡ್ ಹೇಳಿರಲಿಲ್ಲ. ನಾನು ಯಾಕೆ ಕೊಟ್ಟರು ಅಂಥ ಕೇಳಿರಲಿಲ್ಲ. ಈಗಲೂ ಅಷ್ಟೇ ಯಾಕೆ ತಪ್ಪಿಸಿ ದ್ದೀರಿ ಅಂತಾ ನಾನು ಕೇಳಿಯೂ ಇಲ್ಲ, ಅವರು ಹೇಳಿಯೂ ಇಲ್ಲ ಎಂದು ಹೇಳಿದ್ದಾರೆ.

2014 ರಲ್ಲಿ ಅಚಾನಕ್ ಆಗಿ ನನಗೆ ಬಿಜೆಪಿ ಟಿಕೆಟ್ ಸಿಕ್ಕಿತು. 2024ರಲ್ಲಿ ಪಕ್ಷ ನನ್ನ ಬದಲು ಬೇರೆಯವರಿಗೆ ಟಿಕೆಟ್ ಕೊಟ್ಟಿದೆ. ಇದರಿಂದ ನನಗೆ ಯಾವುದೇ ಬೇಸರ ಇಲ್ಲ. ಪಕ್ಷ ನನ್ನ ತಾಯಿ ಇದ್ದ ಹಾಗೆ ಮತ್ತು ಪಕ್ಷದ ಅಭ್ಯರ್ಥಿ ಗೆಲುವಿಗೆ ನಾನು ಶ್ರಮಿಸುತ್ತೇನೆ.

ನಾನು ಯದುವೀರ ಅವರಿಗೆ ಟಿಕೆಟ್ ಸಿಕ್ಕ ಕೂಡಲೇ ಅವರಿಗೆ ಕರೆ ಮಾಡಿ ,ನಿಮ್ಮ ಏಜೆಂಟ್ ಆಗಿ ಕೆಲಸ ಮಾಡುತ್ತೇನೆ ಮತ್ತು ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದ ನಾನು ಹೇಳಿದೆ.

ಯದುವೀರ್ ಅವರು ಅರ ಮನೆ ಉತ್ತರಾಧಿಕಾರಿಯಾಗಿರುವುದರಿಂದ ಮಹಾರಾಜರಾಗಿ ಕೆಲಸ ಮಾಡುತ್ತಾರಾ ಇಲ್ಲ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಾರಾ ಎಂಬ ಪ್ರಶ್ನೆ ಎತ್ತಿದ್ದೆ ಅಷ್ಟೆ ಎಂದು ಸ್ಪಷ್ಟಪಡಿಸಿದ್ದಾರೆ.ಲೋಕಸಭೆ ಚುನಾವಣೆ : ಹೆಚ್.ಡಿ.ಕೆ ಮಂಡ್ಯದಿಂದ ಸ್ಪರ್ಧೆ ?

ಬಿಜೆಪಿ ಟಿಕೆಟ್ ಕೈ ತಪ್ಪಿದ ಮೇಲೆ ಕಾಂಗ್ರೆಸ್ ಪಕ್ಷದಿಂದ ಆಹ್ವಾನ ಬಂದಿದೆಯಾ ಎಂಬ ಪ್ರಶ್ನೆಗೆ ಪ್ರತಾಪ್ ಸಿಂಹ ಸ್ಪಷ್ಟವಾಗಿ ಉತ್ತರ ನೀಡಲು ನಿರಾಕರಿಸಿದ್ದಾರೆ.

Share This Article
Leave a comment