ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಅಲ್ಲದೇ 2023 ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾನುವಾರ ಘೋಷಿಸಿದರು.
ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ , ನಾನು ಚಾಮುಂಡೇಶ್ವರಿಯಿಂದ ಮತ್ತೆ ಚುನಾವಣೆಗೆ ನಿಲಲ್ಲ. ಇದು ವೆರಿ ವೆರಿ ಕ್ಲೀಯರ್.. ಮತ್ತೆ ಮತ್ತೆ ನನ್ನ ಕರೆಯಬೇಡಿ. ಇದನ್ನು ನಿಮ್ಮ ತಲೆಯಿಂದ ತೆಗೆದುಹಾಕಿ, ನನ್ನ ಖುಷಿ ಪಡಿಸೋಕೆ ಕೂಡ ಪದೇ ಪದೇ ಇಲ್ಲಿಗೆ ಬನ್ನಿ ಎಂದು ಕರೆಯಬೇಡಿ. ನಾನು ಯಾರನ್ನೋ ಒಬ್ಬರನ್ನ ನಿಲ್ಲಿಸ್ತೀನಿ, ಅವರನ್ನು ಗೆಲ್ಲಿಸಿ ಅಷ್ಟೇ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.ಇದನ್ನು ಓದಿ –ತಮಿಳುನಾಡಿನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು,ಶಾಲಾ ಬಸ್‍ಗೆ ಬೆಂಕಿ
ಇದು ನನ್ನ ಕಟ್ಟ ಕಡೆಯ ಚುನಾವಣೆ. ಅದಾದ ಮೇಲೆ ಯಾವ ಹುದ್ದೆ ಕೊಟ್ಟರೂ ನಾನೂ ಸ್ವೀಕರಿಸಲ್ಲ. ರಾಜ್ಯಸಭೆ ಮೆಂಬರ್ ಆಗಿ ಅಂದರೂ ನಾನು ಆಗಲ್ಲ ಎಂದರು.
ಕಳೆದ ಚುನಾವಣೆಯಲ್ಲಿ ನೀವು ನನ್ನನ್ನು ಕೈಬಿಟ್ಟಿರೀ, ಆಗ ಬಾದಾಮಿ ಕ್ಷೇತ್ರದ ಜನತೆ ನನ್ನ ಕೈ ಹಿಡಿದರು. ಈಗ ಮತ್ತೆ ನನ್ನ ಕರೆಯುತ್ತಿದ್ದಾರೆ. ಇತ್ತ ಕೋಲಾರ, ಕೊಪ್ಪಳ, ಹುಣಸೂರು ಕ್ಷೇತ್ರದವರು ಕರೆಯುತ್ತಿದ್ದಾರೆ. ಎಲ್ಲಾದರೂ ಒಂದು ಕಡೆ ನಿಲ್ತೀನಿ. ಆದರೆ ಚಾಮುಂಡೇಶ್ವರಿಯಲ್ಲಿ ನಿಲ್ಲವುದಿಲ್ಲ ಎಂದು ಖಡಾ ಖಂಡಿತವಾಗಿ ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು