ಸುದ್ದಿಗಾರರಿಗೆ ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು , ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಮತ್ತು ಲೋಕಸಭೆ ಟಿಕೆಟ್ ಆಕಾಂಕ್ಷಿಯು ಅಲ್ಲ .
ಈಗಾಗಲೇ ನನ್ನ ಅಭಿಪ್ರಾಯವನ್ನು ಸಾಕಷ್ಟು ಬಾರಿ ಸ್ಪಷ್ಟವಾಗಿ ಹೇಳಿದ್ದೇನೆ ಮತ್ತು ಹೇಳಿಕೆಯನ್ನು ಬದಲಾಯಿಸುವ ವ್ಯಕ್ತಿ ನಾನಲ್ಲ ಎಂದು ಹೇಳಿದ್ದಾರೆ.
ದೇವೇಗೌಡರು, ಕುಮಾರಸ್ವಾಮಿ (H.D Kumaraswamy) ಹಾಗೂ ನಮ್ಮ ಮಂಡ್ಯ ನಾಯಕರು ಕುಳಿತು ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ.
ನಮ್ಮ ನಾಯಕರ ಜೊತೆಗೆ ಬಿಜೆಪಿ (BJP) ಅಭ್ಯರ್ಥಿಗಳು, ಕಾರ್ಯಕರ್ತ ಭಾವನೆಗಳನ್ನು ಕಲೆ ಹಾಕಿ ಅಂತಿಮವಾಗಿ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ನಿಖಿಲ್ ತಿಳಿಸಿದ್ದಾರೆ.ಗುರುಕಿರಣ್ ಮನೆಯಲ್ಲಿ 2.50 ಲಕ್ಷ ರೂ. ಕಳ್ಳತನ
ಹೆಚ್.ಡಿ ಕುಮಾರಸ್ವಾಮಿಯವರ ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇವೆಲ್ಲ ಊಹಾಪೋಹಗಳು . ಯಾರು ಸ್ಪರ್ಧೆ ಮಾಡ್ತಾರೆ ಅನ್ನೋದು ಮುಖ್ಯವಲ್ಲ , ಜೆಡಿಎಸ್ ಮಂಡ್ಯ ಜಿಲ್ಲೆಯಲ್ಲಿ ಸ್ಥಾನವನ್ನು ಪಡೆದುಕೊಳ್ಳುವುದು ಬಹಳ ಮುಖ್ಯ ಎಂದು ಹೇಳಿಕೆ ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು