January 28, 2026

Newsnap Kannada

The World at your finger tips!

election , politics , JDS

ಅನಾಗರಿಕ, ವಿಕೃತ ರಾಜಣ್ಣಗೆ ತಕ್ಕ ಪಾಠ ಕಲಿಸುತ್ತೇನೆ – ಮಾಜಿ ಸಿಎಂ HDK ಗುಡುಗು

Spread the love

ಅತ್ಯಂತ ಅನಾಗರಿಕ, ವಿಕೃತವಾಗಿ ನಮ್ಮ ತಂದೆಯವರ ಬಗ್ಗೆ ಮಾತನಾಡಿರುವ ಮಾಜಿ ಶಾಸಕ ಕೆ ಎನ್ ರಾಜಣ್ಣಗೆ ನಾನೇ ತಕ್ಕ ಪಾಠ ಕಲಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಗುಡುಗಿದರು.

ರಾಜಣ್ಣ ತನ್ನ ಹೀನ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಈ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ ಅನುಭವಿಸಲಿದ್ದಾರೆ ಎಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜನತಾಮಿತ್ರ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆಯೇ ಆಕ್ರೋಶ ಹೊರ ಹಾಕಿದರು.ಇದನ್ನು ಓದಿ –ಬೆಂಗಳೂರಿನಲ್ಲಿ ಮಗುವನ್ನು ಕೊಂದು ತಾಯಿಯೂ ಆತ್ಮಹತ್ಯೆ

ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸುತ್ತೇವೆ. ದೇವರ ಮೆರವಣಿಗೆಗೂ ಭುಜ ಕೊಡುತ್ತೇವೆ. ಭುಜ ಕೊಟ್ಟೇ ಮೆರವಣಿಗೆ ಮಾಡೋದಲ್ಲವೇ? ದೇವೇಗೌಡರು ಕೂಡ ಹಾಗೆಯೇ, ನಮ್ಮ ಪಾಲಿಗೆ ಅವರು ದೈವವೇ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ರಾಜಣ್ಣನ ಮಾತಿನ ದುರಹಂಕಾರ ಕೇಳಿದ್ದೇನೆ. ಆತ ಬ್ರಹ್ಮನಲ್ಲ, ಆತನೂ ಒಬ್ಬ ಹುಲು ಮಾನವ. ದೇವೇಗೌಡರು ಶತಾಯುಷಿಗಳಾಗಿ ನಾಡಿನಲ್ಲಿ ಬದುಕುತ್ತಾರೆ ಎಂಬ ನಂಬಿಕೆ ನನ್ನದು ಎಂದರು

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕೆ. ಎನ್ ರಾಜಣ್ಣ ವಿರುದ್ಧ ಕಿಡಿಕಾರಿದ್ದಾರೆ.

ಕೆ.ಎನ್.ರಾಜಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಇಬ್ರಾಹಿಂ ಅವರು, ದೇವೇಗೌಡರು ಈ ರಾಜ್ಯದ ಪಿತಾಮಹ. ಕರ್ನಾಟಕದ ಆರೂವರೆ ಕೋಟಿ ಜನರ ತಂದೆ. ಆದರೆ, ದೇವೇಗೌಡರ ಹುಟ್ಟು, ಸಾವಿನ ಬಗ್ಗೆ ಮಾತನ್ನಾಡುತ್ತಾರೆ ರಾಜಣ್ಣ ನಿಮಗೆ ಅಪ್ಪ ಇಲ್ಲವಾ? ದೇವೇಗೌಡರು ಅಜರಾಮರರು. ದೇವೇಗೌಡರಿಗೆ ಸಾವಿಲ್ಲ ಸೂರ್ಯ, ಚಂದ್ರ ಇರುವವರೆಗೂ ಅವರ ಹೆಸರು ಶಾಶ್ವತವಾಗಿರುತ್ತದೆ. ಇವರು ಕೆಂಪು ಕೋಟೆ ಮೇಲೆ ಧ್ವಜ ಹಾರಿಸಿದವರು. ಕೂಡಲೇ ದೇವೇಗೌಡರ ಮನೆಗೆ ಬಂದು ಕ್ಷಮೆ ಯಾಚಿಸಬೇಕು ಎಂದು ಹೇಳಿದರು.ಮಂಡ್ಯ : ಬಿಯರ್ ತುಂಬಿದ ಟ್ರಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ, ಚಾಲಕ ಸಾವು : ಎಣ್ಣೆಗಾಗಿ ಮುಗಿಬಿದ್ದ ಜನರು.!

ಇನ್ನೆರಡು ಮೂರು ತಿಂಗಳು ನೋಡಲಿ. ದೇವೇಗೌಡರೇ ಸ್ವತಂತ್ರವಾಗಿ ಓಡಾಡುತ್ತಾರೆ. ದೇವೇಗೌಡರ ಹಣೆಬರಹ ಬರೆದವರು, ಅವರನ್ನು ಎಲ್ಲರೂ ಹೋಗಿದ್ದಾರೆ. ಕ್ಷಮೆ ಕೇಳಬೇಕು ಅಂತಾ ಹೇಳುವುದಿಲ್ಲ. ದೇವೇಗೌಡರ ಮಗ ನಾನು ಇನ್ನೂ ಬದುಕಿದ್ದೇನೆ. ಮಧುಗಿರಿಗೆ ಬಂದು ತೋರಿಸುತ್ತೇನೆ. ನಾನು ಉತ್ತರ ಕೊಡುವುದಲ್ಲಾ, ಅಲ್ಲಿನ ಜನರಿಂದಲೇ ಉತ್ತರ ಕೊಡಿಸುತ್ತೇನೆ ಎಂದು ರಾಜಣ್ಣ ವಿರುದ್ಧ ತೊಡೆತಟ್ಟಿದರು.

error: Content is protected !!